Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು...

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಮುಖ್ಯ: ಥಾವರ್ ಚಂದ್ ಗೆಹ್ಲೊಟ್

ವಾರ್ತಾಭಾರತಿವಾರ್ತಾಭಾರತಿ3 April 2022 9:31 PM IST
share
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಮುಖ್ಯ: ಥಾವರ್ ಚಂದ್ ಗೆಹ್ಲೊಟ್

ಬೆಂಗಳೂರು, ಎ.3: ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಇಂದಿನ ಕಾಲದಲ್ಲಿ ತಂತ್ರಜ್ಞಾನ ಬಹಳ ಮುಖ್ಯವಾಗಿದೆ. ತರಗತಿಗಳಲ್ಲಿ ಡಿಜಿಟಲ್ ಕಲಿಕಾ ಸಾಧನಗಳನ್ನು ಪರಿಣಾಮಕಾರಿಯಾಗಿ ಬಳಸುವುದರಿಂದ ತರಗತಿಯಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಮತ್ತು ಭಾಗವಹಿಸುವಿಕೆಯನ್ನು ಹೆಚ್ಚಿಸಬಹುದು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಹೇಳಿದರು.

ಭಾನುವಾರ ಬೆಂಗಳೂರಿನಲ್ಲಿ ಸಿಂಧಿ ಪದವಿ ಪೂರ್ವ ಕಾಲೇಜನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಮಕ್ಕಳು ಮತ್ತು ಯುವಕರ ಭವಿಷ್ಯಕ್ಕೆ ಸರಿಯಾದ ಮಾರ್ಗವನ್ನು ತೋರಿಸಲು ಮತ್ತು ದೇಶದಲ್ಲಿ ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸಲು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸಬೇಕು, ಶಿಕ್ಷಕರ ತರಬೇತಿಗೆ ವ್ಯವಸ್ಥೆ ಮಾಡಬೇಕು, ಅಂತರ್ಗತ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡಬೇಕು, ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸಬೇಕು. ಪರಿಸರ ಸಂರಕ್ಷಣೆ ಮತ್ತು ನೀರಿನ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.

2015 ರಲ್ಲಿ ಭಾರತ ಸರಕಾರವು ಅಳವಡಿಸಿಕೊಂಡ ಸುಸ್ಥಿರ ಅಭಿವೃದ್ಧಿ ಕಾರ್ಯಸೂಚಿಯ ಪ್ರಕಾರ, 2030ರ ವೇಳೆಗೆ ಎಲ್ಲರಿಗೂ ಒಳಗೊಳ್ಳುವ ಮತ್ತು ಸಮಾನ ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಮತ್ತು ಜೀವಿತಾವಧಿಯ ಶಿಕ್ಷಣಕ್ಕಾಗಿ ಅವಕಾಶಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದೆ ಎಂದ ಅವರು, ನಮ್ಮ ದೇಶವು ಅಭಿವೃದ್ಧಿಯ ಹಂತದಲ್ಲಿದೆ ಮತ್ತು ಆಧುನಿಕ ಮತ್ತು ಭವಿಷ್ಯದ ಅವಶ್ಯಕತೆಗಳಿಗೆ ಅನುಗುಣವಾಗಿ ನಾವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹೊಂದಿದ್ದೇವೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ-2020 21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ನಮ್ಮ ದೇಶದ ಅಭಿವೃದ್ಧಿಗೆ ಅಗತ್ಯವಾದ ಅವಶ್ಯಕತೆಗಳನ್ನು ಪೂರೈಸುವುದು ಇದರ ಗುರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನ ಅಡಿಯಲ್ಲಿ ಮತ್ತು ಪ್ರತಿಯೊಂದು ಹಂತದಲ್ಲೂ ಶಿಕ್ಷಣ ತಜ್ಞರು, ತಜ್ಞರು ಮತ್ತು ಶಿಕ್ಷಕರ ಸಲಹೆಯಗಳ ಎನ್‍ಇಪಿ ಜಾರಿಗೊಳಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿರುವುದು ಸಂತಸದ ವಿಷಯ ಎಂದು ಹೇಳಿದರು.

ಸಿಂಧಿ ಸೇವಾ ಸಮಿತಿಯನ್ನು 1956ರಲ್ಲಿ, ಸಮಾಜ ಮತ್ತು ಸಿಂಧಿ ಸಮುದಾಯಕ್ಕೆ ವಿಶೇಷವಾಗಿ ಸೇವೆ ಮಾಡುವ ಉದ್ದೇಶದಿಂದ ಮಾನವೀಯ ಸೇವೆ ತತ್ವದೊಂದಿಗೆ ಬೆಂಗಳೂರು ನಗರದ ಸಿಂಧಿಗಳಿಂದ ಸಾಮಾಜಿಕ ಮತ್ತು ಲೋಕೋಪಕಾರಿ ಸಂಸ್ಥೆಯಾಗಿ ಸ್ಥಾಪಿಸಲಾಯಿತು. ಅಂದಿನಿಂದ ಸಮಿತಿಯು ಸಮಾಜ, ಶಿಕ್ಷಣ ಮತ್ತು ಆರೋಗ್ಯಕ್ಕೆ ಸೇವೆ ಸಲ್ಲಿಸುವ ಗಮನಾರ್ಹ ಕೆಲಸವನ್ನು ಮಾಡಿದೆ. ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ, ಸಿಂಧಿ ಸೇವಾ ಸಮಿತಿಯಿಂದ ಶಿಶುವಿಹಾರದಿಂದ ಸ್ನಾತಕೋತ್ತರ ಪದವಿಯವರೆಗೆ ಒಂಬತ್ತು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಸಿಂಧಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್‍ಗಳು ಉತ್ತಮ ಶೈಕ್ಷಣಿಕ ವಾತಾವರಣದೊಂದಿಗೆ ಅತ್ಯಾಧುನಿಕ ಮೂಲಸೌಕರ್ಯದಲ್ಲಿ ಅತ್ಯುನ್ನತ ಶೈಕ್ಷಣಿಕ ಗುಣಮಟ್ಟದೊಂದಿಗೆ ಶಿಕ್ಷಣವನ್ನು ನೀಡಲು ಹೆಸರುವಾಸಿಯಾಗಿದೆ ಎಂದು ತಿಳಿಸಿದರು.

ಶಿಕ್ಷಣವು ನಮ್ಮೆಲ್ಲರ ಜೀವನದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಮತ್ತು ಮಾನವ ಸಾಮಥ್ರ್ಯದ ಬೆಳವಣಿಗೆಗೆ ದಾರಿ ಮಾಡಿಕೊಡುತ್ತದೆ. ಸಮಾಜದಲ್ಲಿ ಸಾಮಾಜಿಕ ನ್ಯಾಯ ಮತ್ತು ವೈಜ್ಞಾನಿಕ ಬೆಳವಣಿಗೆಗೆ ಸಮಾನತೆಯನ್ನು ಸ್ಥಾಪಿಸಲು ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿಂಧಿ ಶಿಕ್ಷಣ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಸಂಸದರಾದ ಶಂಕರ್ ಲಾಲ್ವಾನಿ, ಸಿಂಧಿ ಸೇವಾ ಸಮಿತಿ ಅಧ್ಯಕ್ಷರಾದ ಮದನ್ ದೌಲತರಾಮ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X