ಚಿಕ್ಕಮಗಳೂರು : ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯ

ದ್ರುವರಾಜ್ ಅರಸ್
ಚಿಕ್ಕಮಗಳೂರು : ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಗವನಹಳ್ಳಿಯ ದ್ರುವರಾಜ್ ಅರಸ್ (26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ವಸ್ತಾರೆ ಪ್ರಮೋದ್ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಕುವಿನಿಂದ ಇರಿದು ದ್ರುವರಾಜ್ ನನ್ನು ಕೊಲೆ ಮಾಡಲಾಗಿದ್ದು, ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಹಣಕಾಸಿನ ವಿಚಾರಕ್ಕೆ ಹತ್ಯೆ ನಡೆದಿರುವ ಶಂಕೆ ಇದೆ ಎಂದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story





