ಅಯೋಧ್ಯೆ: ಹೆದ್ದಾರಿಯಲ್ಲಿ ಬಸ್ ಅಪಘಾತ, 3 ಮಂದಿ ಮೃತ್ಯು, 30 ಜನರಿಗೆ ಗಾಯ

ಲಕ್ನೊ: ಉತ್ತರ ಪ್ರದೇಶದ ಅಯೋಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇನ್ನೂ 30 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಅಯೋಧ್ಯೆಯ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಹೇಳಿದ್ದಾರೆ.
ಬಸ್ ದಿಲ್ಲಿಯಿಂದ ಉತ್ತರ ಪ್ರದೇಶದ ಸಿದ್ಧಾರ್ಥನಗರದ ಬನ್ಸಿಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ-27ರಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಮುಂದಾದಾಗ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
Next Story





