ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.75 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
"ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು" ಎಂದು ಸಿಎಂ ಅವರು ಟ್ವೀಟ್ ಮಾಡಿದ್ದಾರೆ.
"ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು": ಮುಖ್ಯಮಂತ್ರಿ @BSBommai
— CM of Karnataka (@CMofKarnataka) April 5, 2022
Next Story





