Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಿಕೋದ್ಯಮ ಕಲಿಕೆಗೆ ಸಂಪನ್ಮೂಲ,...

ಪತ್ರಿಕೋದ್ಯಮ ಕಲಿಕೆಗೆ ಸಂಪನ್ಮೂಲ, ಸಂಶೋಧನೆ ಎರಡೂ ಅಗತ್ಯ: ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ

ವಾರ್ತಾಭಾರತಿವಾರ್ತಾಭಾರತಿ5 April 2022 2:53 PM IST
share
ಪತ್ರಿಕೋದ್ಯಮ ಕಲಿಕೆಗೆ ಸಂಪನ್ಮೂಲ, ಸಂಶೋಧನೆ ಎರಡೂ ಅಗತ್ಯ: ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ

ಮಂಗಳೂರು: ನೂತನ ಶಿಕ್ಷಣ ಪದ್ಧತಿ ಫಲಿತಾಂಶ ಆಧಾರಿತ, ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಪತ್ರಿಕೋದ್ಯಮ ಶಿಕ್ಷಕರೂ ಉದ್ಯಮದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿ, ಎಲ್ಲರ ಸಹಕಾರದೊಂದಿಗೆ ವಿದ್ಯಾರ್ಥಿಗಳನ್ನು ರೂಪಿಸಬೇಕಾಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪತ್ರಿಕೋದ್ಯಮ ಪದವಿ ಪಠ್ಯಕ್ರಮ (ಎನ್ಇಪಿ) ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕುಲಪತಿಗಳು, ಸಂಶೋಧನೆ, ಸಂಪನ್ಮೂಲಗಳೆರಡೂ ಪತ್ರಿಕೋದ್ಯಮ ಶಿಕ್ಷಣಕ್ಕೆ ಅತ್ಯಗತ್ಯ. ವಿದ್ಯಾರ್ಥಿಗಳಿಗೆ ಸ್ಪರ್ಧೆ ಆಧಾರಿತ ಶಿಕ್ಷಣ ನೀಡಿ ಅವರನ್ನು ಜೀವನಕ್ಕೆ ಅಣಿಗೊಳಿಸಬೇಕಾಗಿದೆ, ಎಂದರಲ್ಲದೆ ವಿವಿ ಅಧೀನದ ಪತ್ರಿಕೋದ್ಯಮ ವಿಭಾಗಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದರು.

ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿದ ಉಜಿರೆಯ ಎಸ್.ಡಿ.ಎಂ ಕಾಲೇಜಿನ (ಸ್ವಾಯತ್ತ) ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಭಾಸ್ಕರ ಹೆಗ್ಡೆ, ಕರಾವಳಿ ಜಿಲ್ಲೆಗಳ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೇಡಿಕೆಯಿದೆ. ಇದನ್ನು ಉಳಿಸಿಕೊಳ್ಳಬೇಕಾಗಿದೆ. ನೂತನ ಪಠ್ಯಕ್ರಮ ಜಾರಿಗೆ ತರಲು ಉಪನ್ಯಾಸಕರು ತಮ್ಮ ಜ್ಞಾನವನ್ನು ಹಂಚಿಕೊಳ್ಳುವುದು ಮುಖ್ಯವಾಗುತ್ತದೆ, ಎಂದರು.

ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರು ಮಾತನಾಡಿ, ಹೊಸ ತಲೆಮಾರಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಕಲಿಸಲು ಉಪನ್ಯಾಸಕರು ಹೊಸದನ್ನು ಸ್ವೀಕರಿಸುವ ಪ್ರವೃತ್ತಿ ರೂಢಿಸಿಕೊಳ್ಳ ಬೇಕಿದೆ ಎಂದರು. 

ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ. ಶಾನಿ ಕೆ ಆರ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಾಗಾರದ ಅಗತ್ಯತೆಯ ಬಗ್ಗೆ ಬೆಳಕು ಚೆಲ್ಲಿದರು. ವಿವಿಧ ಕಾಲೇಜುಗಳ ಪತ್ರಿಕೋದ್ಯಮ ಉಪನ್ಯಾಸಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸ್ನಾತಕೋತ್ತರ ವಿಭಾಗಗಳ ಸಂಯೋಜಕರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಎಸ್ ಡಿ ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಹಾಗೂ ಪತ್ರಿಕೋದ್ಯಮ ಶಿಕ್ಷಕ, ಸಬ್ಸ್ಯಾಂಡ್ ಸ್ಕ್ರೈಬ್ಸ್, ಮೀಡಿಯಾ ವೆಂಚರ್ಸ್ನ  ವ್ಯವಸ್ಥಾಪಕ ನಿರ್ದೇಶಕ ಹರ್ಷ ರಾಜ್ ಗಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಪದವಿ ವಿಭಾಗದ ಅಧ್ಯಯನ ಮಂಡಳಿಯ ಮುಖ್ಯಸ್ಥೆ ಪ್ರೊ. ಕಿಶೋರಿ ನಾಯಕ್ ಕೆ,  ಪತ್ರಿಕೋದ್ಯಮ ಶಿಕ್ಷಕನಾಗಿ ಎಲ್ಲವನ್ನೂ ಕಲಿಯಲೇಬೇಕು ಎಂದರಲ್ಲದೆ, ಮುಂದಿನ ಸೆಮಿಸ್ಟರ್ಗಳ ಪಠ್ಯಕ್ರಮ ಜಾರಿಗೆ ಈಗಲೇ ತಯಾರಿ ಆರಂಭಿಸಬೇಕಾಗಿದೆ, ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X