Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಗ್ರಂಥ:...

ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಗ್ರಂಥ: ನಿವೃತ್ತ ನ್ಯಾ. ನಾಗಮೋಹನ್‍ದಾಸ್

ವಾರ್ತಾಭಾರತಿವಾರ್ತಾಭಾರತಿ5 April 2022 6:02 PM IST
share
ದೇಶಕ್ಕೆ ಸಂವಿಧಾನವೇ ಶ್ರೇಷ್ಠ ಗ್ರಂಥ: ನಿವೃತ್ತ ನ್ಯಾ. ನಾಗಮೋಹನ್‍ದಾಸ್

ಬಾಗೇಪಲ್ಲಿ: ದೇಶದ ಪ್ರತಿಯೊಬ್ಬ ನಾಗರೀಕನಿಗೂ ಸಂವಿಧಾನವೇ ಅತ್ಯಂತ ಪವಿತ್ರವಾದ ಗ್ರಂಥವಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‍ದಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಸ್ಟಾರ್ ಪಂಕ್ಷನ್ ಹಾಲ್‍ನಲ್ಲಿ ದಲಿತ ಹಕ್ಕುಗಳ ಸಮಿತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು,  'ದೇಶದಲ್ಲಿ ವಿವಿಧ ದರ್ಮಗಳಿಗೆ ಬೇರೆ ಬೇರೆ ಗ್ರಂಥಗಳಿರಬಹುದು ಆದರೆ ಸರ್ವಕಾಲಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವೇ ಅತ್ಯಂತ ಶ್ರೇಷ್ಟ ಗ್ರಂಥ ಎಂಬುದನ್ನು ಮರೆಯಬಾರದು' ಎಂದು ಹೇಳಿದರು.

'ಇಂದು ಬಲಪಂಥೀಯ ಸರಕಾರಗಳಿಂದ ಸಂವಿಧಾನಕ್ಕೆ ದಕ್ಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ನಾವು ಅದನ್ನು ಕಾಪಾಡದೆ ಹೋದರೆ ದೇಶಕ್ಕೆ ಉಳಿಗಾಳವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ ಅವರು ಸಂವಿಧಾನ ಕೇವಲ ವಕೀಲರಿಗೆ ಮತ್ತು ನ್ಯಾಯಾಧೀಶರಿಗೆ ಮಾತ್ರ ಅಲ್ಲ ದೇಶದ ಪ್ರತಿಯೊಬ್ಬ ನಾಗರೀಕನೂ ಅದರ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಇಂದು ಧರ್ಮ ಧರ್ಮಗಳ ನಡುವೆ ಜಾತಿ ಜಾತಿಗಳ ನಡುವೆ ವೈಷಮ್ಯ ಬೆಳೆಸುವ ಉನ್ನಾನ ನಡೆಯುತ್ತಿದೆ' ಎಂದರು. 

ಇಂದು ದೇಶದಲ್ಲಿ ಪೇಟ್ರೋಲ್. ಡೀಸೆಲ್ ಅಡುಗೆ ಎಣ್ಣೆ, ದಿನಸಿ ಸಾಮಾಗ್ರಿಗಳ ಬೆಲೆಗಳು ಗಗನಕ್ಕೆ ಏರುತ್ತಿದ್ದರೂ ಯಾವ ಬಲಪಂಥೀಯನೂ ಚಕಾರ ವೆತ್ತುತ್ತಿಲ್ಲ ಬದಲಿಗೆ ಜನರ ಮದ್ಯೆ ಎತ್ತಿ ಕಟ್ಟುವ ಕಾಯಕ ಮಾಡುವಲ್ಲಿ ನಿರತರಾಗಿದ್ದಾರೆ ನಾವು ಜಾಗೃತರಾಗಿ ಸರ್ವಾಧಿಕಾರಿ ಧೋರಣೆಯ  ಬಗ್ಗೆ ದ್ವನಿ ಎತ್ತದೆ ಒಗ್ಗಟ್ಟು ಇಲ್ಲದೆ ಹೋದರೆ ನಮ್ಮ ಭಾವಿ ನಾವೇ ತೋಡಿಕೊಳ್ಳುವಂತಾಗುತ್ತದೆ ಎಂದರು.

ಪ್ರಗತಿಪರ ಚಿಂತಕ ಪ್ರಜಾ ವೈದ್ಯ ಡಾ.ಅನಿಲ್‍ಕುಮಾರ್ ಆವುಲಪ್ಪ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಇಡೀ ಜಿಲ್ಲೆಯ ಎಲ್ಲಾ ವೈದ್ಯರನ್ನು ತಲಾ 20 ಹಳ್ಳಿಗಳನ್ನು ತೆಗೆದುಕೊಂಡು ಬಾಗೇಪಲ್ಲಿ ತಾಲ್ಲೂಕು ಜನರಿಗೆ ಉಚಿತ ಸೇವೆ ಮಾಡೋಣ ಎಂದು ಹೇಳಿದ್ದೆ ಆದರೆ ಯಾವೊಬ್ಬ ವೈದ್ಯನೂ ಸಹಾಯಕ್ಕೆ ಬರಲಿಲ್ಲ ನಾನೇ ತಾಲ್ಲೂಕುನಾದ್ಯಂತ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಮಾಡಿದೆ ಆದರೆ ಅವರು ಹೊಟ್ಟೆ ತುಂಬಿದವರು ನಾನು ಒಂದು ರೀತಿಯಲ್ಲಿ ಹೊಟ್ಟೆ ತುಂಬಿದವನೇ ಆದರೆ ಸಾದ್ಯವಾದಷ್ಟು ಜನರ ಸೇವೆ ಮಾಡಿದರೆ ನನಗೂ ಒಳ್ಳೆಯದಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ದಲಿತ ಹಕ್ಕುಗಳರಾಜ್ಯ ಸಮಿತಿಯ ಸಹ ಸಂಚಾಲರಾದ ರಾಜಶೇಖರಮೂರ್ತಿ, ರಾಜಣ್ಣ, ಬಿಳ್ಳೂರು ನಾಗರಾಜು, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ, ತಾಲ್ಲೂಕು ಕಾರ್ಯದರ್ಶಿ ಮಹಮದ್ ಅಕ್ರಂ, ಮುಖಂಡರಾದ ಅಶ್ವತ್ತನಾರಾಯಣ, ಮಂಜುನಾಥ, ಉತ್ತನ್ನ, ಅಶ್ವತ್ತಪ್ಪ, ರಾಮಚಂದ್ರ, ಮುನಿಯಪ್ಪ, ಲಕ್ಷ್ಮಣ, ಜಿ.ಕೃಷ್ಣಪ್ಪ, ಗಂಗುಲಪ್ಪ ಡಿ.ಸಿ.ಶ್ರೀನಿವಾಸ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X