ದ.ಕ.ಜಿಲ್ಲೆ: ಓರ್ವರಲ್ಲಿ ಕೊರೋನ ಪಾಸಿಟಿವ್ ಪತ್ತೆ
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಂಗಳವಾರ 1 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗುವುದರೊಂದಿಗೆ ಪಾಸಿಟಿವಿಟಿ ದರ ಶೇ.೦.೨೪ ದಾಖಲಾಗಿದೆ. ಸದ್ಯ ಜಿಲ್ಲೆಯಲ್ಲಿ ೧,೩೫,೪೮೮ ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಸೋಂಕಿತರ ಪೈಕಿ ಮಂಗಳವಾರ ಒಬ್ಬರು ಗುಣಮುಖರಾಗಿದ್ದಾರೆ. ಅದರೊಂದಿಗೆ ಈವರೆಗೆ ೧,೩೩,೬೩೨ ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ ೭ ಸಕ್ರಿಯ ಪ್ರಕರಣವಿದೆ. ಅಲ್ಲದೆ ಈವರೆಗೆ ೧೮೫೦ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story