ಕೋಟ; ರಸ್ತೆ ಅಪಘಾತಕ್ಕೆ ಓರ್ವ ಬಲಿ, ಮೂವರಿಗೆ ಗಾಯ

ಕೋಟ : ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಂತಿದ್ದ ಈಚರ್ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಸವಾರರೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಸವಾರ ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ.
ಮಂಗಳೂರಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಈಚರ್ ವಾಹನ ಹೆದ್ದಾರಿ ಮಧ್ಯೆ ಕೆಟ್ಟು ನಿಂತಿತ್ತು. ಅದೇ ದಾರಿಯಾಗಿ ಕೋಟದಿಂದ ಕುಂಭಾಶಿ ಕಡೆಗೆ ಒಂದು ಬೈಕಿನಲ್ಲಿ ಮೂವರು ಹೋಗುತ್ತಿದ್ದರು.
ಈಚರ್ ವಾಹನವನ್ನು ಗಮನಿಸಿದ ಬೈಕ್ ಸವಾರ ಅತೀವೇಗದಿಂದ ಬಂದು ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಎನ್ನಲಾಗಿದೆ. ಇದರಿಂದ ಮೂವರು ತೀವ್ರವಾಗಿ ಗಾಯಗೊಂಡರು. ಅದರಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈಚರ್ ವಾಹನ ಚಾಲಕನು ಕೂಡ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.
ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story