Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆ: ಇಂಧನ ಬೆಲೆಗಳ ಏರಿಕೆ ವಿರುದ್ಧ...

ಲೋಕಸಭೆ: ಇಂಧನ ಬೆಲೆಗಳ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ, ಪ್ರತಿಭಟನೆಯಿಂದ ಸದನ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ5 April 2022 8:43 PM IST
share
ಲೋಕಸಭೆ: ಇಂಧನ ಬೆಲೆಗಳ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ, ಪ್ರತಿಭಟನೆಯಿಂದ ಸದನ ಮುಂದೂಡಿಕೆ

ಹೊಸದಿಲ್ಲಿ, ಎ.5: ಹೆಚ್ಚುತ್ತಿರುವ ಇಂಧನಗಳ ಬೆಲೆಗಳ ವಿರುದ್ಧ ಮತ್ತು ಏಕರೂಪ ಭತ್ತ ಖರೀದಿ ನೀತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಮಂಗಳವಾರ ಲೋಕಸಭೆಯಲ್ಲಿ ಕಲಾಪಗಳು ಸ್ಥಗಿತಗೊಂಡವು.

ಸದನದ ಬಾವಿಗೆ ನುಗ್ಗಿದ ಪ್ರತಿಪಕ್ಷ ಸದಸ್ಯರ ತೀವ್ರ ಗದ್ದಲ, ಪ್ರತಿಭಟನೆಯ ಬಳಿಕ ಕೆಳಮನೆಯನ್ನು ಮುಂದೂಡಲಾಯಿತು. ಘೋಷಣೆಗಳ ನಡುವೆಯೇ ಪ್ರಶ್ನೆವೇಳೆಯನ್ನು ನಡೆಸಲು ಸ್ಪೀಕರ್ ಓಂ ಬಿರ್ಲಾ ಪ್ರಯತ್ನಿಸಿದರಾದರೂ ಯಶ ಕಾಣದೆ ಸದನವನ್ನು ಅರ್ಧ ಗಂಟೆ ಕಾಲ ಮುಂದೂಡಿದರು.
ಮಧ್ಯಾಹ್ನ 12 ಗಂಟೆಗೆ ಸದನವು ಮರುಸಮಾವೇಶಗೊಂಡಾಗ ಕಾಗದಪತ್ರಗಳನ್ನು ಮಂಡಿಸಲಾಯಿತಾದರೂ ಶೂನ್ಯವೇಳೆ ಕೆಲವೇ ನಿಮಿಷಗಳಿಗೆ ಸೀಮಿತವಾಗಿತ್ತು ಮತ್ತು ಸ್ಪೀಕರ್ ಸದನವನ್ನು ಮತ್ತೆ ಅಪರಾಹ್ನ ಎರಡು ಗಂಟೆಯವರೆಗೆ ಮುಂದೂಡಿದರು.

ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎನ್ಸಿಪಿ, ಎಡಪಕ್ಷಗಳು ಮತ್ತು ಬಳಿಕ ಶಿವಸೇನೆ ಹೆಚ್ಚುತ್ತಿರುವ ಇಂಧನ ಬೆಲೆಗಳ ವಿರುದ್ಧ ಪ್ರತಿಭಟನೆ ನಡೆಸಿದರೆ ಟಿಆರ್ಎಸ್ ಸಂಸದರು ಭತ್ತ ಖರೀದಿ ವಿಷಯದಲ್ಲಿ ಗದ್ದಲವೆಬ್ಬಿಸಿದರು.
ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಟಿಎಂಸಿಯ ಅಸಿತ್ ಕುಮಾರ ಮಾಲ್ ಅವರು,‘ದಿನನಿತ್ಯದ ಸಾಮಗ್ರಿಗಳ ಬೆಲೆ ಏರಿಕೆಯಿಂದ ಈ ದೇಶದ ಜನರು ತೀವ್ರ ಕ್ಷೋಭೆಗೊಳಗಾಗಿದ್ದಾರೆ. ಇದು ಮಿತಿಗಳನ್ನು ಮೀರುತ್ತಿದೆ.ಇದು ಎಲ್ಲಿಗೆ ನಿಲ್ಲಲಿದೆ? ಅಸಹನೀಯ ಬೆಲೆಏರಿಕೆಯನ್ನು ತಗ್ಗಿಸುವುದಾಗಿ ದೇಶವಾಸಿಗಳಿಗೆ ಭರವಸೆ ನೀಡುವಂತೆ ನಾನು ಪ್ರಧಾನಿಯವರಿಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ ’ಎಂದರು.
ಪ್ರತ್ಯೇಕವಾಗಿ ಟಿಆರ್ಎಸ್ ಸದಸ್ಯರು ಏಕರೂಪ ಭತ್ತ ಖರೀದಿ ನೀತಿಗಾಗಿ ಆಗ್ರಹಿಸಿ ಮತ್ತು ಭತ್ತ ಬೆಳೆಯುತ್ತಿರುವ ರಾಜ್ಯಗಳಿಗೆ ಅನ್ಯಾಯವೆಸಗದಂತೆ ಒತ್ತಾಯಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಸದನವು ಎರಡನೇ ಬಾರಿ ಮುಂದೂಡಲ್ಪಡುವ ಮುನ್ನ ಸಂಕ್ಷಿಪ್ತ ಅವಧಿಯಲ್ಲಿ ಬಿಜೆಪಿಯ ಸಂಘಮಿತ್ರ ವೌರ್ಯ ಅವರು ಸಾಮ್ರಾಟ ಅಶೋಕ ಜನ್ಮದಿನವನ್ನು ಅಂದು ಅವರ ಗೌರವಾರ್ಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಯಸುವವರಿಗಾಗಿ ಸಾಮ್ರಾಟ ಅಶೋಕ ಜಯಂತಿ ಎಂದು ಘೋಷಿಸುವಂತೆ ಕೇಂದ್ರವನ್ನು ಆಗ್ರಹಿಸಿದರು. ಅಶೋಕ ಜನ್ಮದಿನವನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಲು ಸರಕಾರವು ಈಗಾಗಲೇ ತಿರಸ್ಕರಿಸಿರುವುದರಿಂದ ತಾನು ಈ ಬೇಡಿಕೆಯನ್ನು ಮುಂದಿಡುತ್ತಿದ್ದೇನೆ ಎಂದರು.
ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು, ಜಮ್ಮು-ಕಾಶ್ಮೀರ ಲೋಕಸೇವಾ ಆಯೋಗ (ಜೆಕೆಪಿಎಸ್ಸಿ)ದ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಇತರ ರಾಜ್ಯಗಳ ಅಭ್ಯರ್ಥಿಗಳ ಮಟ್ಟಕ್ಕೆ ಹೆಚ್ಚಿಸುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡರು. ಜಮ್ಮು-ಕಾಶ್ಮೀರದಲ್ಲಿ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಬೆಟ್ಟು ಮಾಡಿದರು.

ಇತರ ರಾಜ್ಯಗಳಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು 30 ದಿನಗಳ ನೋಟಿಸ್ ನೀಡಲಾಗುತ್ತಿದ್ದರೆ ಜೆಕೆಪಿಎಸ್ಸಿ ಕೇವಲ ಏಳು ದಿನಗಳ ನೋಟಿಸ್ ನೀಡುತ್ತಿದೆ ಎಂದು ಹೇಳಿದ ಅವರು,‘ಇತರ ಎಲ್ಲ ರಾಜ್ಯಗಳು ಪಿಎಸ್ಸಿ ಪರೀಕ್ಷೆಗೆ ಹಾಜರಾಗಲು 37ರಿಂದ 42 ವರ್ಷಗಳ ಗರಿಷ್ಠ ವಯೋಮಿತಿಯನ್ನು ಹೊಂದಿದ್ದರೆ, ಜಮ್ಮು-ಕಾಶ್ಮೀರದಲ್ಲಿ 32 ವರ್ಷಗಳ ಗರಿಷ್ಠ ವಯೋಮಿತಿಯಿದೆ. ಜಮ್ಮು-ಕಾಶ್ಮೀರದಲ್ಲಿಯ ಯುವಜನರಿಗೆ ಉದ್ಯೋಗಗಳನ್ನು ನಾವು ನಿರಾಕರಿಸಲು ಹೇಗೆ ಸಾಧ್ಯ? ಇತರ ರಾಜ್ಯಗಳಲ್ಲಿಯಂತೆ ಜಮ್ಮು-ಕಾಶ್ಮೀರದಲ್ಲಿಯೂ ವಯೋಮಿತಿಯನ್ನು ಹೆಚ್ಚಿಸುವಂತೆ ನಾನು ಕೋರುತ್ತೇನೆ ’ಎಂದರು.
2021ರ ಅಧಿಸೂಚನೆಯಲ್ಲಿ ಜೆಕೆಪಿಎಸ್ಸಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ತಗ್ಗಿಸಲಾಗಿದೆ,ಆದರೆ ಹೆಚ್ಚಿನ ಇತರ ರಾಷ್ಟ್ರಗಳಲ್ಲಿ ಗರಿಷ್ಠ ವಯೋಮಿತಿ 42 ವರ್ಷ ಆಗಿದೆ ಎಂದು ಅಬ್ದುಲ್ಲಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X