ಪ್ರಧಾನಿ ಮೋದಿಗೆ ಸುಭಾಷ್ ಚಂದ್ರ ಬೋಸ್ ಪ್ರತಿಮೆ ನೀಡಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್

ಮೈಸೂರು,ಎ.5: ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿರುವ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅರುಣ್ ಯೋಗಿರಾಜ್ ಮಂಗಳವಾರ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು ಈ ವೇಳೆ ಮೋದಿ ಅವರಿಗೆ ಅರುಣ್ ಯೋಗಿರಾಜ್ ಅವರು ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನ ಉಡುಗೊರೆಯಾಗಿ ನೀಡಿದರು.
ಈ ಹಿಂದೆ ಕೇದಾರನಾಥದಲ್ಲಿ ಪ್ರತಿಷ್ಠಾಪಿಸಲಾಗಿರುವ ಶಂಕರಾಚಾರ್ಯರ ಪ್ರತಿಮೆಯನ್ನ *ಶಿಲ್ಪಿ ಯೋಗಿರಾಜ್ ನಿರ್ಮಿಸಿದ್ದರು. ಇನ್ನು ಅರುಣ್ ಯೋಗಿರಾಜ್ ಅವರ ಬಗ್ಗೆ ಸ್ವತಃ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ*.
Glad to have met @yogiraj_arun today. Grateful to him for sharing this exceptional sculpture of Netaji Bose. pic.twitter.com/DeWVdJ6XiU
— Narendra Modi (@narendramodi) April 5, 2022
Next Story







