ಆರೋಗ್ಯದಲ್ಲಿ ಏರುಪೇರು: ಕಲ್ಲಡ್ಕ ಪ್ರಭಾಕರ ಭಟ್ ಆಸ್ಪತ್ರೆಗೆ ದಾಖಲು

ಬಂಟ್ವಾಳ, ಎ.5: ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಇದ್ದ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ರಕ್ತದೊತ್ತಡದಿಂದ ಈ ರೀತಿಯಾಗಿದೆ ಎಂದು ತಿಳಿದುಬಂದಿದೆ.
ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ 78 ವರ್ಷ ವಯಸ್ಸಾಗಿದೆ.
Next Story