ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ರನ್ನು ಬಂಧಿಸಿದ ಸಿಬಿಐ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ದೇಶ್ ಮುಖ್ ಅವರನ್ನು ಬಂಧಿಸಿದೆ.
ಇದಕ್ಕೂ ಮೊದಲು ಸಿಬಿಐ, ದೇಶಮುಖ್ ಅವರ ಆಪ್ತ ಸಹಾಯಕ ಕುಂದನ್ ಶಿಂಧೆ ಹಾಗೂ ಕಾರ್ಯದರ್ಶಿ ಸಂಜೀವ್ ಪಲಾಂಡೆ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು ಹಾಗೂ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಝೆ ಅವರನ್ನು ವಜಾಗೊಳಿಸಿತ್ತು.
ಇದಕ್ಕೂ ಮುನ್ನ ಬಾಂಬೆ ಹೈಕೋರ್ಟ್ ಅನಿಲ್ ದೇಶಮುಖ್ ಅವರ ಮನವಿಯನ್ನು ಆಲಿಸಲು ನಿರಾಕರಿಸಿತ್ತು. ತನ್ನ ವಿರುದ್ಧ ಆಪಾದಿಸಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಕಸ್ಟಡಿಗೆ ಕೋರಿ ಸಲ್ಲಿಸಿದ ಅರ್ಜಿಯನ್ನು ಅನುಮತಿಸಿದ ವಿಶೇಷ ಸಿಬಿಐ ನ್ಯಾಯಾಲಯದ ಆದೇಶವನ್ನು ದೇಶಮುಖ್ ಪ್ರಶ್ನಿಸಿದ್ದರು.
ಅರ್ಜಿಯನ್ನು ಮತ್ತೊಂದು ಪೀಠದ ಮುಂದೆ ಇಡುವಂತೆ ನ್ಯಾಯಮೂರ್ತಿ ಡೇರೆ ಸೂಚಿಸಿದ್ದರು.
Next Story





