Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವರಿಗೆ ತಮ್ಮ ಹುದ್ದೆಯಲ್ಲಿ...

ಗೃಹ ಸಚಿವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇದೆಯೇ: ಸಿದ್ದರಾಮಯ್ಯ ಪ್ರಶ್ನೆ

"ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ6 April 2022 2:33 PM IST
share
ಗೃಹ ಸಚಿವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇದೆಯೇ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ‘ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ತಮ್ಮ ಸಾಧನೆಗಳ ಬಗ್ಗೆ ಮಾತನಾಡಲು ಅವರ ಬಳಿ ಸಾಧನೆಗಳೇ ಇಲ್ಲ. ಸರಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಅದನ್ನು ಮುಚ್ಚಿಡಲು ಹಿಜಾಬ್, ಹಲಾಲ್, ಮಸೀದಿಗಳ ಧ್ವನಿವರ್ಧಕ ಮುಂತಾದ ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಇದೀಗ ಮಾವಿನ ಹಣ್ಣಿನ ವ್ಯಾಪಾರ ಮಾಡುವ ವಿಚಾರದಲ್ಲೂ ವಿವಾದ ಸೃಷ್ಟಿಸಿದ್ದಾರೆ. ಹಲವು ವರ್ಷಗಳಿಂದ ಹಿಂದೂ-ಮುಸ್ಲಿಮರು ಪರಸ್ಪರ ಹೊಂದಾಣಿಕೆ, ಸಹಕಾರದಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಮೈಸೂರು ಭಾಗದಲ್ಲಿ ಮಾವಿನ ತೋಟ ಇದ್ದವರು ಮುಸ್ಲಿಂ ವರ್ತಕರಿಗೆ ಮಾವಿನ ಹಣ್ಣನ್ನು ಮಾರುತ್ತಿದ್ದರು, ಇಂಥದ್ದಕ್ಕೆಲ್ಲ ಅಡ್ಡ ಬರುತ್ತಾರೆಂದರೆ ಏನರ್ಥ? ಬಿಜೆಪಿಯವರು ಚುನಾವಣೆಗಾಗಿ ಸಮಾಜ ವಿಭಜಿಸಿ ಮತಗಳ ಕ್ರೋಡೀಕರಣ ಮಾಡುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

‘ಧಾರ್ಮಿಕ ಆಚರಣೆ, ನಂಬಿಕೆಗಳನ್ನು ವಿವಾದ ಮಾಡುತ್ತಾ ಹೋದರೆ ಮುಂದೆ ಬಿಜೆಪಿಗೆ ಇದು ತಿರುಗುಬಾಣವಾಗುತ್ತದೆ. ಜನರಿಗೆ ಇವರ ಹುನ್ನಾರ ಅರ್ಥವಾಗಿದ್ದು ಜನ ಬೇಸತ್ತಿದ್ದಾರೆ. ಯಾರಾದರೂ ಮಾವಿನಹಣ್ಣಿನ ವ್ಯಾಪಾರಕ್ಕೂ ಅಡ್ಡ ಬರುತ್ತಾರ? ಜಾತ್ರೆಗಳಲ್ಲಿ ಹಿಂದೂ-ಮುಸ್ಲಿಮರು ವ್ಯಾಪಾರ ಮಾಡುತ್ತಾ ಬಂದಿದ್ದರು, ಅದಕ್ಕೂ ನಿರ್ಬಂಧ ಮಾಡ್ತಿದ್ದಾರೆ. ಎಷ್ಟೋ ವರ್ಷಗಳಿಂದ ‘ಹಲಾಲ್' ನಡೆದುಕೊಂಡು ಬಂದಿದೆ, ನಾವು ಹಲಾಲ್ ಮಾಂಸ ತಿಂದಿದ್ದೇವೆ, ಈಗ ಯಾರೋ ಮಾಂಸ ತಿನ್ನದವರು ಮಾಂಸ ತಿನ್ನುವ ಜನರ ದಾರಿ ತಪ್ಪಿಸುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಟೀಕಿಸಿದರು.

‘ಸರಕಾರ ಬೆಲೆಯೇರಿಕೆ ಬಗ್ಗೆ ಮಾತನಾಡಲಿ. ಹದಿನೈದು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 9 ರೂಪಾಯಿ ಜಾಸ್ತಿಯಾಗಿದೆ, ಅಡುಗೆ ಅನಿಲ, ಅಡುಗೆ ಎಣ್ಣೆ, ಗೊಬ್ಬರ, ಹೊಟೇಲ್ ತಿನಿಸು, ಜನೌಷಧ, ವಿದ್ಯುತ್ ದರ ಮುಂತಾದವುಗಳ ಬೆಲೆ ಜಾಸ್ತಿಯಾಗಿದೆ. ಇದರ ಬಗ್ಗೆ ಬಿಜೆಪಿಯವರು ಮಾತನಾಡುವುದಿಲ್ಲ. ಇವೆಲ್ಲ ಜನರ ಜೀವನಕ್ಕೆ ಸಂಬಂಧಪಟ್ಟವು, ಈ ವಿಚಾರಗಳು ಚರ್ಚೆಯಾಗಬೇಕು. ಜನರ ಜೀವನಕ್ಕೆ ಸಂಬಂಧಿಸದ ವಿಚಾರಗಳನ್ನು ಮಾತನಾಡಿ ಅವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಖಂಡನೀಯವಾದುದ್ದು' ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಮಂಗಳೂರಿಗೆ ಹೋಗಿದ್ದಾಗ ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿದ ಪ್ರಶ್ನೆಗೆ ಕ್ರಿಯೆಗೆ-ಪ್ರತಿಕ್ರಿಯೆ ಇರುತ್ತೆ ಎಂದರು. ಇದು ಕುಮ್ಮಕ್ಕು ಕೊಟ್ಟಂತಾಗಲ್ವ? ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆದಾಗ ಗೃಹ ಸಚಿವರು ಆ ಯುವತಿ ಅಷ್ಟು ಹೊತ್ತಿನಲ್ಲಿ ಅಲ್ಲಿಗೇಕೆ ಹೋಗಿದ್ದು? ಕಾಂಗ್ರೆಸ್‍ನವರು ನನ್ನನ್ನೇ ಅತ್ಯಾಚಾರ ಮಾಡುತ್ತಿದ್ದಾರೆ ಎಂದರು. ದುರಾದೃಷ್ಟವಶಾತ್ ಇಂಥವರು ನಮ್ಮ ಗೃಹ ಸಚಿವರು. ಇವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇದೆಯಾ? ಇವರಿಗೆ ಸಿಎಂ ಬೆಂಬಲ ಕೊಡ್ತಾರೆ. ಸರ್ವಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಲ್ಲಿ ಬಿಜೆಪಿಗೆ ನಂಬಿಕೆ ಇದೆಯೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

‘ಸಚಿವ ಈಶ್ವರಪ್ಪ, ಕೇಂದ್ರ ಸಚಿವ ಭಗವಂತ್ ಖೂಬಾ ಕಲಂ 144  ಉಲ್ಲಂಘಿಸಿದ್ದರು. ಅವರ ಮೇಲೆ ಯಾವುದಾದರೂ ಕಾನೂನು ಕ್ರಮ ಕೈಗೊಂಡಿದ್ದಾರ? ಈ ಇಬ್ಬರನ್ನೂ ಸಚಿವ ಸಂಪುಟದಿಂದ ವಜಾ ಮಾಡಬೇಕಿತ್ತು. ಇದರಿಂದ ರಾಜ್ಯದ ಶಾಂತಿ, ಸುವ್ಯವಸ್ಥೆ ಹಾಳಾಗುತ್ತದೆ. ಬಂಡವಾಳ ಹೂಡಿಕೆಯಾಗಲ್ಲ. ಶಾಸಕ ಪ್ರಿಯಾಂಕ್ ಖರ್ಗೆ ಅವರು ಅಧಿವೇಶನದಲ್ಲಿ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಎಷ್ಟು ಬಂಡವಾಳ ಹೂಡಿಕೆ ಆಗಿದೆ ಮತ್ತು ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಸರಕಾರವನ್ನು ಪ್ರಶ್ನೆ ಕೇಳಿದ್ದರು. ಒಂದು ರೂಪಾಯಿ ಬಂಡವಾಳವೂ ಬಂದಿಲ್ಲ, ಒಂದೇ ಒಂದು ಉದ್ಯೋಗ ಸೃಷ್ಟಿಯಾಗಿಲ್ಲ ಎಂದು ಸರಕಾರ ಉತ್ತರ ನೀಡಿದೆ.

ರಾಜ್ಯದಲ್ಲಿದ್ದ ಕಂಪೆನಿಗಳು ತಮಿಳುನಾಡಿಗೆ ಹೋಗುತ್ತಿವೆ, ನಮ್ಮಲ್ಲಿ ಬಂಡವಾಳ ಹೂಡಿಕೆಗೆ ಬೇಕಾದ ಪೂರಕ ವಾತಾವರಣ ಇಲ್ಲ. ಆಂಧ್ರಪ್ರದೇಶದವರು ಕರ್ನಾಟಕದಲ್ಲಿ ವಾತಾವರಣ ಸರಿಯಿಲ್ಲದಿದ್ದರೆ ನಮ್ಮ ರಾಜ್ಯಕ್ಕೆ ಬನ್ನಿ ಎಂದು ಕಂಪೆನಿಗಳನ್ನು ಕರೆಯುತ್ತಿದ್ದಾರೆ. ಬಿಜೆಪಿಯವರಿಗೆ ಇವರನ್ನು ಉಳಿಸಿಕೊಳ್ಳುವ ಯೋಗ್ಯತೆ ಇದೆಯ? ರಾಜ್ಯವನ್ನು ಹಾಳು ಮಾಡ್ತಿದ್ದಾರೆ. ಈ ಬಿಜೆಪಿ ಸರಕಾರ ತೊಲಗಿದರೆ ಸಾಕು ಎಂದು ಜನ ಕಾಯ್ತಾ ಇದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದರು.

‘ನಾವು ಬಿಜೆಪಿಯ ದುರಾಡಳಿತವನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಹಿಂದುತ್ವದ ಹೆಸರೇಳಿಕೊಂಡು ದ್ವೇಷ ಹರಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದನ್ನು ಜನರಿಗೆ ಅರ್ಥ ಮಾಡಿಸುತ್ತೇವೆ. ಜನ ಮೋಸ ಹೋಗಬಾರದು ಎಂಬುದು ನಮ್ಮ ಕಾಳಜಿ. ದೇಶದ ಜಾತ್ಯತೀತ ತತ್ವವನ್ನು ಉಳಿಸುವುದು ನಮ್ಮ ಕರ್ತವ್ಯ. ಕಾಂಗ್ರೆಸ್ ಪಕ್ಷ ಎಲ್ಲ ಧರ್ಮಗಳ ಜನರಿಗೆ ರಕ್ಷಣೆ ಕೊಡುತ್ತದೆ. ಸರಕಾರಕ್ಕೆ ಧರ್ಮವಿಲ್ಲ, ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ' ಎಂದು ಸಿದ್ದರಾಮಯ್ಯ ಟೀಕಿಸಿದರು.

‘ಯಾರದ್ದೇ ಕೊಲೆಯಾದರೂ ನಾನು ಖಂಡಿಸುತ್ತೇನೆ. ಅದು ಹಿಂದೂವಾಗಿರಲಿ, ಮುಸ್ಲಿಂ ಆಗಿರಲಿ. ಯಾರೇ ಸತ್ತರೂ ಅದು ಒಂದು ಜೀವವಲ್ಲವೇ? ಶಿವಮೊಗ್ಗದ ಹರ್ಷನ ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದೀನಿ. ಈ ಗೃಹ ಸಚಿವರಿಗೆ ಅನುಭವವೂ ಇಲ್ಲ, ಗೃಹ ಇಲಾಖೆಯನ್ನು ನಿಭಾಯಿಸುವ ಸಾಮಥ್ರ್ಯವೂ ಇಲ್ಲ. ನರಗುಂದದಲ್ಲಿ ಕೊಲೆಯಾದ ಸಮೀರ್ ಎಂಬ ಯುವಕನಿಗೆ ಸರಕಾರ ಪರಿಹಾರ ಕೊಟ್ಟಿದೆಯಾ? ಬೆಳ್ತಂಗಡಿಯಲ್ಲಿ ಭಜರಂಗದಳದ ಕಾರ್ಯಕರ್ತರನಿಂದ ಕೊಲೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಪರಿಹಾರ ನೀಡಿದ್ರಾ? ಹರ್ಷ, ದಿನೇಶ್, ಸಮೀರ್ ಎಲ್ಲರೂ ಮನುಷ್ಯರೆ?'
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X