ಜವಾನ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ : ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು ೧೭ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿರುವ, ಕನ್ನಡ ಭಾಷೆ ಓದಲು, ಬರೆಯಲು ತಿಳಿದಿರುವ ಹಾಗೂ ಲಘು ವಾಹನ ಚಾಲನಾ ಲೈಸನ್ಸ್ ಹೊಂದಿ ರುವ ಅರ್ಹ ಅಭ್ಯರ್ಥಿಗಳು ಮೇ ೫ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಮೇ ೭ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್-https://districts.ecourts.gov.in/udupi-onlinerecruitment- ಅಥವಾ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.
Next Story