ಎ.23: ಮಂಗಳೂರು ವಿ.ವಿ. ಘಟಿಕೋತ್ಸವ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ೪೦ನೇ ವಾರ್ಷಿಕ ಘಟಿಕೋತ್ಸವವು ಎ.೨೩ರ ಪೂ.೧೧ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣ ನಡೆಯಲಿದೆ.
ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶ ಎಸ್. ಅಬ್ದುಲ್ ನಝೀರ್ ಘಟಿಕೋತ್ಸವ ಭಾಷಣ ಮಾಡುವರು. ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್‌ನಾರಾಯಣ್ ಸಿ.ಎನ್. ಉಪಸ್ಥಿತರಿರುವರು ಎಂದು ಮಂಗಳೂರು ವಿಶ್ವವಿದ್ಯಾನಿಲದ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story