ಎ.7ರಿಂದ ಈಜುಕೊಳಗಳಿಗೆ ಮುಕ್ತ ಪ್ರವೇಶ
ಮಂಗಳೂರು : ಸರಕಾರವು ಕೋವಿಡ್ ನಿಯಮಗಳನ್ನು ಸಡಿಲಿಕೆ ಮಾಡಿರುವುದರಿಂದ ಎ.7ರಿಂದ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳಕ್ಕೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.
ಮೇಯರ್ ಪ್ರೇಮಾನಂದ ಶೆಟ್ಟಿ ಈಜುಕೊಳದ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸಿರುವುದನ್ನು ಪರಿಶೀಲಿಸಿದರು. ಎ.7ರಿಂದ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಗೆ ೨೧ ದಿನಗಳ ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ.
Next Story