ಕೆಎಸ್‍ಒಯು: ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(ಕೆಎಸ್‍ಒಯು) 7 ಪ್ರಾಧ್ಯಾಪಕ ಹುದ್ದೆಗಳು ಹಾಗೂ 25 ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸದಂತೆ ಹೈಕೋರ್ಟ್ ಆದೇಶಿಸಿದೆ.
2021ರ ಅ.18ರಂದು ಹೊರಡಿಸಿದ್ದ ಈ ನೇಮಕಾತಿ ಅಧಿಸೂಚನೆಯನ್ನು ನಿಯಮಾವಳಿಗಳಲ್ಲಿ ಸೂಚಿಸಿರುವಂತೆ ರಾಷ್ಟ್ರ ಮಟ್ಟದ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡದೇ ರಾಜ್ಯ ಮಟ್ಟದ ದಿನ ಪತ್ರಿಕೆಗಳಲ್ಲಿ ಮಾತ್ರ ಜಾಹೀರಾತು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸದಂತೆ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್ ನ್ಯಾಯಪೀಠವು ಕನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 7 ಪ್ರಾಧ್ಯಾಪಕ ಹುದ್ದೆಗಳು ಹಾಗೂ 25 ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಅಧಿಸೂಚನೆಯ ನಂತರದ ಎಲ್ಲ ಪ್ರಕ್ರಿಯೆಯನ್ನು ಮುಂದುವರಿಸದಂತೆ ರಾಜ್ಯ ಸರಕಾರ ಮತ್ತು ಕರಾಮುವಿವಿಗೆ ಆದೇಶಿಸಿದೆ.
Next Story





