ತಾಯಿ-ಮಕ್ಕಳ ಆಸ್ಪತ್ರೆ ನಿರ್ವಹಣೆ: ಉಡುಪಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ : ರಾಜ್ಯ ಸರಕಾರ ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿರುವ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರಕ್ಕೆ ಹಸ್ತಾಂತರ ಮಾಡಿ ಸಚಿವ ಸಂಪುಟ ನಿರ್ಧಾರ ಕೈಗೊಂಡಿದ್ದು, ಮುಂದಿನ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಮಂಡಳಿಯವರೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಶಾಸಕ ಕೆ.ರಘುಪತಿ ಭಟ್ ಅವರು ಪಾಲ್ಗೊಂಡಿದ್ದರು.
ಆಸ್ಪತ್ರೆಯ ಮುಂದಿನ ಕಾರ್ಯ ಯೋಜನೆಯ ಮತ್ತು ನಿರ್ವಹಣೆಯ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ವೈದ್ಯಾಧಿಕಾರಿಗಳು, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.







