Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವ ಆರಗ ಜ್ಞಾನೇಂದ್ರ ವಜಾಕ್ಕೆ...

ಗೃಹ ಸಚಿವ ಆರಗ ಜ್ಞಾನೇಂದ್ರ ವಜಾಕ್ಕೆ ಡಿ.ಕೆ.ಶಿವಕುಮಾರ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 April 2022 5:49 PM IST
share
ಗೃಹ ಸಚಿವ ಆರಗ ಜ್ಞಾನೇಂದ್ರ ವಜಾಕ್ಕೆ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಂಗಳೂರು, ಎ. 7: ‘ಸಮಾಜದಲ್ಲಿ ಅಶಾಂತಿ, ಜಾತಿ-ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಲು ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಸಂಪುಟದಿಂದ ವಜಾ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕೆನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೊಲೀಸ್ ಆಯುಕ್ತರು ಗೃಹ ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು. ರಾಜ್ಯದ ಗೃಹ ಸಚಿವರಿಗೆ ಸಾಮಾನ್ಯ ಪ್ರಜ್ಞೆ ಎಂಬುದೇ ಇಲ್ಲ. ಅವರು ಗೃಹ ಸಚಿವರಾಗಿ ಆ ಸ್ಥಾನದ ಪರವಾಗಿ ಮಾತನಾಡುತ್ತಿದ್ದಾರಾ, ಸರಕಾರದ ಪರವಾಗಿ ಮಾತನಾಡುತ್ತಾರಾ, ಅವರ ಪಕ್ಷ ಬಿಜೆಪಿ ಪರ ಮಾತನಾಡುತ್ತಾರಾ ಎಂಬ ಪ್ರಶ್ನೆ ಮೂಡುತ್ತದೆ' ಎಂದು ವಾಗ್ದಾಳಿ ನಡೆಸಿದರು.

‘ಆರಗ ಜ್ಞಾನೇಂದ್ರ ಅವರು ಸಮಾಜದಲ್ಲಿ ಅಶಾಂತಿ ಮೂಡಿಸಲು, ಸಾಮರಸ್ಯ ಕದಡಿಸಲು, ಜನರನ್ನು ತಪ್ಪುದಾರಿಗೆ ಎಳೆಯಲು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಸಿಎಎ ಹಾಗೂ ಇತರೆ ವಿಚಾರಗಳ ಸಂದರ್ಭದಲ್ಲಿ ಹೇಳಿಕೆ ಕೊಟ್ಟವರ ವಿರುದ್ಧ ಪ್ರಕರಣ ದಾಖಲಿಸಿದಂತೆ ಈಗ ಶಾಂತಿ ಕದಡಲು, ಜಾತಿ, ಧರ್ಮದ ನಡುವೆ ವೈಷಮ್ಯ ಮೂಡಿಸಿ, ಗಲಭೆಗೆ ಪ್ರಚೋದನೆ ನೀಡಲು ಪ್ರಯತ್ನಿಸಿದ ಗೃಹ ಸಚಿವರ ವಿರುದ್ಧವೂ ಪ್ರಕರಣ ದಾಖಲಿಸಬೇಕು' ಎಂದು ಕೋರಿದರು.

‘ಜೆಜೆ ನಗರ ಕೊಲೆ ಪ್ರಕರಣವನ್ನು ನಾನು ಖಂಡಿಸುತ್ತೇನೆ. ಇಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಕೊಲೆ ಪ್ರಕರಣ ತನಿಖೆಯಾಗುವ ಮುನ್ನವೇ ಉರ್ದು ಬರುವುದಿಲ್ಲ ಎಂದು ಹೇಳಿದ್ದಕ್ಕೇ ಆ ಯುವಕನನ್ನು ಚುಚ್ಚಿ, ಚುಚ್ಚಿ ಕೊಂದಿದ್ದಾರೆ ಎಂದು ಗೃಹ ಸಚಿವರು ಮೊದಲು ಹೇಳಿಕೆ ನೀಡಿ, ನಂತರ ತಲೆ ಕೆರೆದುಕೊಂಡು ತಮ್ಮ ಹೇಳಿಕೆ ಬದಲಾಯಿಸಿದರು' ಎಂದು ಶಿವಕುಮಾರ್ ತಿಳಿಸಿದರು.

‘ಇನ್ನು ಇದೆಲ್ಲವೂ ಆದ ನಂತರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೋಗಿ ಅವರ ಕುಟುಂಬದವರಿಗೆ ಹೀಗೆ ಹೇಳಿ ಎಂದು ಹೇಳಿಕೊಡುತ್ತಾರೆ. ಇವರೆಲ್ಲರೂ ಕರ್ನಾಟಕ ರಾಜ್ಯವನ್ನು ಏನು ಮಾಡಲು ಹೊರಟಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಗೃಹ ಸಚಿವರು ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಪೊಲೀಸ್ ಅಧಿಕಾರಿಗಳನ್ನು ಎಂಜಲು ತಿನ್ನುವ ನಾಯಿಗಳು ಎಂದರು. ಮೈಸೂರು ರೇಪ್ ಪ್ರಕರಣದಲ್ಲಿ ಸಂಜೆ ನಂತರ ಆ ಯುವತಿ ಹೊರಗೆ ಯಾಕೆ ಹೋಗಬೇಕಿತ್ತು? ಎಂದರು, ನಂತರ ಕಾಂಗ್ರೆಸ್‍ನವರು ನನ್ನ ರೇಪ್ ಮಾಡುತ್ತಿದ್ದಾರೆ ಎಂದೆಲ್ಲಾ ಬೇಜವಾಬ್ದಾರಿ ಹೇಳಿಕೆ ನೀಡಿದ್ದರು' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಇವರು ವಿವೇಚನೆಯೇ ಇಲ್ಲದ ಗೃಹಸಚಿವರು. ಈ ಸಮಯದಲ್ಲಿ ನಾನು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರು ಸಮಯಕ್ಕೆ ಸರಿಯಾಗಿ, ಯಾರ ಒತ್ತಡಕ್ಕೂ ಮಣಿಯದೇ ವಾಸ್ತವ ವಿಚಾರ ತಿಳಿಸಿದರು. ತನಿಖೆ ಮಾಡುವ ಮುನ್ನವೇ ಗೃಹ ಸಚಿವರು ಈ ರೀತಿ ತೀರ್ಪು ಕೊಟ್ಟರೆ ತನಿಖೆ ಪ್ರಾಮಾಣಿಕವಾಗಿ ನಡೆಯುವುದಾದರೂ ಹೇಗೆ? ಪೊಲೀಸರು ಇವರ ಹೇಳಿಕೆ ಇಟ್ಟುಕೊಂಡು ತನಿಖೆ ಮಾಡಲು ಮುಂದಾಗುವುದಿಲ್ಲವೇ? ಗೃಹ ಸಚಿವರೇ ಹೀಗೆ ಹೇಳಿದ್ದಾರೆ, ನಾವೇಕೆ ಬೇರೆ ರೀತಿ ಯೋಚಿಸಬೇಕು ಎಂದುಕೊಳ್ಳುವುದಿಲ್ಲವೇ? ಇದರಿಂದ ತನಿಖೆಯ ದಾರಿ ತಪ್ಪುವುದಿಲ್ಲವೇ?' ಎಂದು ಅವರು ಸಂಶಯ ವ್ಯಕ್ತಪಡಿಸಿದರು.

‘ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಜತೆಗೆ ರಾಜ್ಯದಲ್ಲಿ ಕೋಮು ದ್ವೇಷ ಹಬ್ಬಿಸುವುದನ್ನು ಬಿಟ್ಟು, ಶಾಂತಿ ಕಾಪಾಡಬೇಕು. ಬೇರೆ ರಾಜ್ಯದವರು ನಮ್ಮ ರಾಜ್ಯದ ಪರಿಸ್ಥಿತಿಯ ದುರುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸಚಿವರನ್ನು ಸರಕಾರದಲ್ಲಿ ಮುಂದುವರಿಸಲು ಸಿಎಂಗೆ ಹೇಗೆ ಸಾಧ್ಯವಾಗುತ್ತಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ವಜಾಗೊಳಿಸಬೇಕಿದೆ. ಇವರು ದೇಶದ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದಾರೆ. ಇವರ ನಡೆ ಸಂವಿಧಾನ, ದೇಶದ ಕಾನೂನು ವ್ಯವಸ್ಥೆಗೆ ವಿರುದ್ಧವಾಗಿದೆ. ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ' ಎಂದರು.

‘ವಿಜಯ ದಶಮಿ ಸಮಯದಲ್ಲಿ ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ಸಮವಸ್ತ್ರ ತ್ಯಜಿಸಿ ಕೇಸರಿ ಬಟ್ಟೆ ಹಾಕಿಸಿದ್ದರು. ಇನ್ನು ಮುಖ್ಯಮಂತ್ರಿ ನೈತಿಕ ಪೊಲೀಸ್‍ಗಿರಿಗೆ ಬೆಂಬಲ ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ, ಇಂತಹ ವಾತಾವರಣಕ್ಕೆ ಮುಖ್ಯಮಂತ್ರಿಗಳ ದೌರ್ಬಲ್ಯವೇ ಕಾರಣ. ನೈತಿಕ ಪೊಲೀಸ್‍ಗಿರಿ, ಅವರದೇ ಪ್ರತ್ಯೇಕ ಕಾನೂನು ಇರುವುದಾದರೆ, ಪೊಲೀಸ್ ಇಲಾಖೆ, ಸಂವಿಧಾನ, ಕಾನೂನು ಏಕೆ ಇರಬೇಕು?' ಎಂದು ಅವರು ತಿಳಿಸಿದರು.

‘ಮಂಡ್ಯ ಯುವತಿ ಮುಸ್ಕಾನ್ ವಿಚಾರವಾಗಿ ವಿದೇಶದ ಸಂಘಟನೆಯ ವ್ಯಕ್ತಿಯೊಬ್ಬ ಹೇಳಿಕೆ ನೀಡಿರುವುದನ್ನು ನಾವು ಖಂಡಿಸುತ್ತೇವೆ. ನಮ್ಮ ದೇಶದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಬೇರೆ ಯಾರಿಗೂ ಅಧಿಕಾರವಿಲ್ಲ. ನಮ್ಮ ದೇಶದ ಐಕ್ಯತೆ, ಸಮಗ್ರತೆ, ಶಾಂತಿ ವಿಚಾರದಲ್ಲಿ ಬೇರೆಯವರು ತಲೆ ಹಾಕಬಾರದು, ಇದಕ್ಕೆ ಸರಕಾರ ಅವಕಾಶ ನೀಡಬಾರದು. ಈ ಸಂಘಟನೆಗಳನ್ನು ಈಗಾಗಲೇ ನಿಷೇಧಿಸಲಾಗಿದ್ದು, ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ’ ಎಂದು ಅವರು ಸ್ಪಷ್ಟಣೆ ನೀಡಿದರು.

ಹೊಟ್ಟೆ ಮೇಲೆ ಹೊಡೆಯುವ ಪ್ರಯತ್ನ

‘ಜಾತ್ರೆಗಳ ಸಮಯದಲ್ಲಿ ಜನ ಅವರಿಗೆ ಇಚ್ಛೆ ಬಂದವರ ಬಳಿ ವ್ಯಾಪಾರ ಮಾಡುತ್ತಾರೆ, ಹೋಗುತ್ತಾರೆ. ಯಾರು ಯಾವ ಜಾತಿಯವರು ಬಂದು ಮಾರಾಟ ಮಾಡಿದರು ಎಂದು ನೋಡುವುದಿಲ್ಲ. ಸುಮ್ಮನೆ ಎಲ್ಲರ ಹೊಟ್ಟೆ ಮೇಲೆ ಹೊಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಮುಂದೆ ಯುವಕರಿಗೆ ನಿರುದ್ಯೋಗ ಸಮಸ್ಯೆ ಯಾವ ರೀತಿ ಕಾಡಲಿದೆ ಎಂದು ಹೇಳಲು ಸಾಧ್ಯವಿಲ್ಲ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X