Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ...

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಿ: ಉಡುಪಿ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 April 2022 7:10 PM IST
share
ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಿ: ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆಗಳನ್ನು ನೀಡಿದ್ದಾರೆ. 

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಕಳೆದ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶದ ವಾರ್ಡ್‌ಗನ್ನು ಪಟ್ಟಿ ಮಾಡಿಕೊಂಡು, ಆ ಪ್ರದೇಶಗಳಲ್ಲಿ ಈ ಬಾರಿ ಸಮಸ್ಯೆ ತಲೆದೋರದಂತೆ, ನೀರಿನ ಸರಬರಾಜನ್ನು  ಸಮರ್ಪಕವಾಗಿ ಮಾಡಲು ತಕ್ಷಣದಿಂದಲೇ ಯೋಜನೆ ರೂಪಿಸಿ. ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ. ಸಮಸ್ಯೆ ಕಂಡು ಬಂದಾಗಲೇ ನೀರು ಸರಬರಾಜು ಮಾಡಬೇಕು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ತಲೆದೋರದಂತೆ ಸಾಕಷ್ಟು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಬೆಳೆಹಾನಿ, ಪ್ರಾಕೃತಿಕ ವಿಕೋಪ ಹಾನಿಯ ವಿವರಗಳನ್ನು ದಾಖಲಿಸಲು ವೆಬ್ ಆಧಾರಿತ ತಂತ್ರಜ್ಞಾನ ಇದ್ದು, ಇದರಲ್ಲಿಯೇ ಎಲ್ಲಾ ಹಾನಿಯ ವಿವರಗಳನ್ನು ದಾಖಲಿಸಬೇಕು. ವಿಕೋಪದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಸಲುವಾಗಿ, ನಿರ್ಮಿಸಲು ಉದ್ದೇಶಿಸಿರುವ ಡಿಜಿಟಲ್ ರೇಡಿಯೋ ಟವರ್ ಮತ್ತು ಸೈರನ್ ಟವರ್‌ಗಳನ್ನು ಅಳವಡಿಸಲು, ಈಗಾಗಲೇ ಗುರುತಿಸ ಲಾಗಿರುವ ಸ್ಥಳಗಳಲ್ಲಿ ಶೀಘ್ರದಲ್ಲಿ ಟವರ್ ಅಳವಡಿಕೆ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದು ತಿಳಿಸಿದರು.

ವಿಕೋಪಕ್ಕೆ ಸಿಲುಕಿದವರನ್ನು ರಕ್ಷಿಸಲು ರಕ್ಷಣಾ ಕಾರ್ಯದಲ್ಲಿ ತೊಡಗುವ ಸಂಬಂಧಪಟ್ಟ ಇಲಾಖೆಗಳು, ತಮಗೆ ಅಗತ್ಯವಿರುವ ರಕ್ಷಣಾ ಉಪಕರಣಗಳ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಲ್ಲಿ, ಅವುಗಳನ್ನು ಕೂಡಲೇ ಸರಬರಾಜು ಮಾಡಲಾಗುವುದು. ಈಗಾಗಲೇ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಖಾತೆಯಲ್ಲಿ ವಿಕೋಪ ನಿರ್ವಹಣೆಗೆ ಮೊತ್ತವನ್ನು ಹಂಚಿಕೆ ಮಾಡಲಾಗಿದೆ.  ಜಿಲ್ಲಾ ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆಯ ಎಸ್ಪಿ ಅಂಶು ಕುಮಾರ್, ಅಪರ ಜಿಲ್ಲಾಧಿಕಾರಿ ವೀಣಾ, ಜಿಪಂ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಸಿದ್ಧಲಿಂಗಪ್ಪ, ರಾಜ್ಯ ಯೋಜನಾ ಅನುಷ್ಠಾನ ಘಟಕದ ಯೋಜನಾ ವ್ಯವಸ್ಥಾಪಕ ಡಾ.ರಾಜ್‌ಕುಮಾರ್ ಪೂಜಾರಿ, ಕುಂದಾಪುರ ಉಪಭಾಗಾಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X