ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ
ಉಡುಪಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪಿಎಲ್‌ವಿ ಯೋಜನೆ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೆಕಾಲಿಕ ಕಾನೂನು ಸ್ವಯಂ ಸೇವಕರ (ಪ್ಯಾರಾ ಲೀಗಲ್ ವಾಲಂಟಿಯರ್) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎ.೨೦ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಆವರಣ, ಉಡುಪಿ ದೂರವಾಣಿ ಸಂಖ್ಯೆ: ೦೮೨೦-೨೫೨೩೩೫೫ ನ್ನು ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.
Next Story





