Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ ಸಂದರ್ಭದಲ್ಲಿ ಸಿಕ್ಕ ವರದಿಯ ಅನುಸಾರ...

ಆ ಸಂದರ್ಭದಲ್ಲಿ ಸಿಕ್ಕ ವರದಿಯ ಅನುಸಾರ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ: ಸಚಿವ ಈಶ್ವರಪ್ಪ ಸಮರ್ಥನೆ

ವಾರ್ತಾಭಾರತಿವಾರ್ತಾಭಾರತಿ7 April 2022 8:17 PM IST
share
ಆ ಸಂದರ್ಭದಲ್ಲಿ ಸಿಕ್ಕ ವರದಿಯ ಅನುಸಾರ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ: ಸಚಿವ ಈಶ್ವರಪ್ಪ ಸಮರ್ಥನೆ

ಶಿವಮೊಗ್ಗ, ಏ.07: 'ಆ ಸಂದರ್ಭದಲ್ಲಿ ಸಿಕ್ಕ ವರದಿಯ ಅನುಸಾರ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಅವರಿಗೆ ಸರಿಯಾದ ಮಾಹಿತಿ ಸಿಕ್ಕ ಕೂಡಲೇ ಮತ್ತೆ ಕರೆದು ಸುದ್ದಿಗೋಷ್ಠಿ ನಡೆಸಿ, ಪ್ರಾಮಾಣಿಕ ಹೇಳಿಕೆ ನೀಡಿದ್ದಾರೆ. ವಿಪಕ್ಷದವರು ಇರುವುದೇ ವಿರೋಧ ಮಾಡಲು, ಟೀಕೆ ಮಾಡಲು. ಇದನ್ನು ಯಾಕೆ ದೊಡ್ಡದು ಮಾಡುತ್ತಿದ್ದಾರೋ ಗೊತ್ತಿಲ್ಲ ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಗೃಹಮಂತ್ರಿ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆಗಳಿಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ನಿರಪರಾಧಿ ಚಂದ್ರುವಿನ ಕೊಲೆಯಾಗಿದೆ. ಗೂಂಡಾಗಿರಿ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಹೇಳಿಕೆಯನ್ನು ವಿಪಕ್ಷದವರು ನೀಡಬೇಕಿತ್ತು. ಮೊನ್ನೆ ಕುಮಾರಸ್ವಾಮಿಯವರು ಕೂಡ ಈ ರೀತಿಯ ಹೇಳಿಕೆ ನೀಡಿ, ಬಳಿಕ ಕ್ಷಮೆ ಕೋರಿದ್ದರು. ವಿರೋಧ ಮಾಡಲೆಂದೇ, ಈ ರೀತಿಯ ಹೇಳಿಕೆಗಳನ್ನು ನೀಡುವುದು ತಪ್ಪು. ಮೈಸೂರು ಅತ್ಯಾಚಾರ ಪ್ರಕರಣದ ಸಮಯದಲ್ಲಿ ಆರಗ ಅವರು ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದರು. ರಾಜಕೀಯ ಬೇರೆ, ಭಾವನೆ ಬೇರೆ. ನಮ್ಮ ಮಗಳೇನಾದರೂ, ಈ ರೀತಿ ಸಂಜೆ ಬಳಿಕವೂ ಹೋದರೆ ನಾವು ಕೇಳಲ್ವಾ? ಭಾವನಾತ್ಮಕವಾಗಿ ಆರಗ ಜ್ಞಾನೇಂದ್ರ ಆಗ ಹೇಳಿಕೆ ನೀಡಿದ್ದರು ಎಂದು ಹೇಳಿದರು.

ಮನೆ ಮಗಳಿಗೆ ಹೇಳುವ ಬುದ್ಧಿ ಮಾತುಗಳ ರೀತಿ ಹೇಳಿದ್ದರು. ಇದನ್ನು ಕೂಡ ವಿರೋಧ ಪಕ್ಷದವರು ವಿರೋಧಿಸಿದ್ದರು. ಕೇವಲ ವಿರೋಧ ಮಾಡಲೆಂದೇ ವಿರೋಧ ಮಾಡುವುದು ಒಳ್ಳೆಯದಲ್ಲ. ಪ್ರಥಮ ಮಾಹಿತಿ ಆಧರಿಸಿ, ಚಂದ್ರು ಪ್ರಕರಣದಲ್ಲಿ ಹೇಳಿಕೆ ನೀಡಿದ್ದರು. ಬಳಿಕ ಅದನ್ನು ಸರಿಪಡಿಸಿಕೊಂಡು, ಪ್ರಾಮಾಣಿಕವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ಮೊದಲು ಹೇಳಿದ್ದೆ ಸರಿ ಎಂದು ಕೂತಿದ್ದಾರಾ? ಎಂದು ಪ್ರಶ್ನಿಸಿದರು.

ಅಧಿಕೃತ ವಿಪಕ್ಷ ಸ್ಥಾನವೂ ದೊರೆಯಲ್ಲ: ರಾಷ್ಟ್ರಭಕ್ತರು ಯಾರು, ರಾಷ್ಟ್ರದ್ರೋಹಿಗಳು ಯಾರು ಎಂಬುದನ್ನು ಮುಂದಿನ ಚುನಾವಣೆಯಲ್ಲಿ ಮತದಾರರೇ ತೀರ್ಮಾನಿಸುತ್ತಾರೆ. ಕಾಂಗ್ರೆಸ್ ತನ್ನ ನಡವಳಿಕೆ ಬದಲಿಸಿಕೊಳ್ಳದಿದ್ದಲ್ಲಿ ಮುಂದೆ ಅವರಿಗೆ ಅಧಿಕೃತ ವಿಪಕ್ಷ ಸ್ಥಾನವೂ ದೊರೆಯುವುದಿಲ್ಲ ಎಂದು ಹೇಳಿದರು.

ಕೋಮುವಾದವನ್ನು ಬಿಜೆಪಿ ಬೆಳೆಸುತ್ತಿಲ್ಲ. ಕಾನೂನುಗಳನ್ನು ಗೌರವಿಸಿಯೇ ಎ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಪ್ರತಿಕ್ರಿಯಿಸುತ್ತಿzರೆ. ಆದರೆ, ಕಾಂಗ್ರೆಸ್ ನವರಿಗೆ ಆರೋಪ ಹೊರಿಸುವುದೇ ಒಂದು ಕೆಲಸವಾಗಿದೆ. ಜೊತೆಗೆ ವಿರೋಧ ಪಕ್ಷ ಇರುವುದು ಟೀಕೆ ಮಾಡಲು ಮಾತ್ರ ಸೀಮಿತವಾಗಿದೆ ಎಂದರು.

ರಾಷ್ಟ್ರೀಯ ವಿಷಯಗಳು ಬಂದಾಗ ಹೇಗೆ ಮಾತಾಡಬೇಕು, ಏನು ಮಾತಾಡಬೇಕೆಂದು ಬಿಜೆಪಿಗೆ ಗೊತ್ತಿದೆ. ಕಾಂಗ್ರೆಸ್ ನವರಿಂದ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ಬೆಲೆ ಏರಿಕೆ ಇಂದು ಅನಿವಾರ್ಯವಾಗಿದೆ. ಕೊರೋನಾದಂತಹ ಸಂಕಷ್ಟದ ಜವಾಬ್ದಾರಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳುಹೊತ್ತುಕೊಂಡಿವೆ. ಮತ್ತು ಈಗಿರುವ ಪರಿಸ್ಥಿತಿಯಲ್ಲಿ ಬೆಲೆ ಏರಿಕೆ ಅನಿವಾರ್ಯವಾಗಿದೆ. ಆದರೂ, ಹಲವು ಪರಿಹಾರಗಳನ್ನು ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ ಮತ್ತು ರೈತರ ಪರವಾಗಿ ನಿಂತಿವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಲಿದೆ. ಇದೆ ಕಾಂಗ್ರೆಸ್ ಮುಖಂಡರ ಕಿರಿಕ್ ಹೇಳಿಕೆಗಳು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X