Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವರ ಹೇಳಿಕೆ ಸಮಾಜದಲ್ಲಿ ಸಂಘರ್ಷ...

ಗೃಹ ಸಚಿವರ ಹೇಳಿಕೆ ಸಮಾಜದಲ್ಲಿ ಸಂಘರ್ಷ ಉಂಟು ಮಾಡುತ್ತದೆ: ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ7 April 2022 9:19 PM IST
share
ಗೃಹ ಸಚಿವರ ಹೇಳಿಕೆ ಸಮಾಜದಲ್ಲಿ ಸಂಘರ್ಷ ಉಂಟು ಮಾಡುತ್ತದೆ: ಕುಮಾರಸ್ವಾಮಿ ಆಕ್ರೋಶ

ಮೈಸೂರು: ಬೆಂಗಳೂರಿನಲ್ಲಿ ಕೊಲೆಯಾದ ಯುವಕ ಉರ್ದು ಮಾತನಾಡಲಿಲ್ಲ ಎಂದು ಚೂರಿನಿಂದ ಚುಚ್ಚಿ  ಕೊಲೆ ಮಾಡಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ. ಈ ರೀತಿ ಗೃಹಸಚಿವರ ಬಾಯಿಂದ ಹೇಳಿಕೆ ಬಂದರೆ ಹಿಂದೂ ಮುಸ್ಲಿಮ್  ಸಮಾಜದ ನಡುವೆ ಸಂರ್ಘ ಉಂಟಾಗದೆ ಇರುತ್ತದೆಯೇ ಎಂದು  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಕೊಲೆಯನ್ನು ಪೊಲೀಸರು ವಿಚಾಚರನ್ನು ಲಘುವಾಗಿ ಪರಿಗಣಿಸಬಾರದು, ಗೃಹ ಸಚಿವರು ಹಿಂದೂ ಯವಕ ಎನ್ನದೆ  ದಲಿತ  ಎನ್ನುತ್ತಾರೆ. ಜನತೆ ಇದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಗೃಹ ಸಚಿವರು ಒಂದು ರೀತಿ ಹೇಳಿಕೆ, ಅಧಿಕಾರಿಗಳು ಒಂದು ರೀತಿ ಹೇಳಿಕೆ. ಯಾರೇ ಇರಲಿ ಸರ್ಕಾರ ಬಿಗಿ ಕೇಸ್ ಹಾಕಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನನ್ನ ಹೋರಾಟ ಯಾವುದೇ ಜಾತಿಯ ಧರ್ಮದ ಜನರ ಓಲೈಕೆಗಾಗಿ ಅಲ್ಲ, ನಾನು ರಾಜ್ಯದ ಶಾಂತಿಗಾಗಿ ಹೋರಾಟ ಮಾಡುತ್ತಿದ್ದೇನೆಯೇ ಹೊರತು ಯಾವುದೇ ಜಾತಿ ಧರ್ಮದ ಓಲೈಕೆ ಮಾಡಿ ಮತಗಳಿಸಲು ಅಲ್ಲ ಎಂದು ಸ್ಪಷ್ಟಪಡಿಸಿದರು.

ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿದಾಗ ಸಮಾಜದ ಸ್ವಾಸ್ಥ್ಯ ಯಾವ ರೀತಿ ಆಗಲಿದೆ ಎಂಬುದನ್ನು ಯೋಚಿಸಿ.  ಗೃಹ ಸಚಿವರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡು ಮಾತನಾಡಬೇಕು, ಅದನ್ನು ಬಿಟ್ಟು ಹೊಣಗೇಡಿ ತನದಿಂದ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ,  ಅವರು ಇಲ್ಲಿ ಕಾಮಿಡಿ ಮಾಡಲು ಬಂದಿದ್ದಾರಾ? ಇಂತಹ ಸಂಧರ್ಭದಲ್ಲಿ ಮುಖ್ಯಮಂತ್ರಿಗಳು ಮೌನ ವಹಿಸಿದ್ದಾರೆ. ಮುಖ್ಯಮಂತ್ರಿಗಳ ಮೌನ ರಾಜ್ಯದಲ್ಲಿ ದೊಡ್ಡ ಅನಾಹುತಕ್ಕೆ ಕಾರಣವಾಗಲಿದೆ. ಮೊದಲು ನಿಮ್ಮ ಮೌನ ಮುರಿಯಿರಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು ದೆಹಲಿಯಲ್ಲಿ ಒಂದು ಹೇಳಿಕೆ ನೀಡಿದ್ದಾರೆ. ನಾನು ಅವರಷ್ಟು ಬುದ್ಧಿವಂತನಲ್ಲ, ಅವರಷ್ಟು ಓದಿಲ್ಲ, ಆದರೆ ಸಾರ್ವಜನಿಕವಾಗಿ ಜನರ ಜೊತೆ ಹೇಗೆ ಬದುಕಬೇಕೆಂಬ ಬದುಕನ್ನು ತಿಳಿದುಕೊಂಡಿದ್ದೇನೆ. ಜನರ ಸಮಸ್ಯೆಗೆ ಯಾವ ರೀತಿ ಸ್ಪಂಧಿಸಬೇಕೆಂದು ತಿಳಿದುಕೊಂಡಿದ್ದೇನೆ. ಸರ್ಕಾರ ನಡೆಸುವವರು ಪ್ರಾರಂಬಿಕ ಹಂತದಲ್ಲಿ  ಇಂತಹ ಸಮಸ್ಯೆಗಳನ್ನು ಚಿವುಟಿ ಹಾಕದಿದ್ದಲ್ಲಿ ಎಲ್ಲೋ ಒಂದು ಕಡೆ ದೊಡ್ಡ ಮಟ್ಟದ ಅನಾಹುತಗಳು ನಾಡಿಗೆ ಕಾದಿರಲಿದೆ. ಅದಕ್ಕೆ ಅವಕಾಶ ಕೊಡಬೇಡಿ ಎಂದು ಹೇಳಿದರು.

ಇತ್ತೀಚಿನ ಸಿನಿಮಾಗಳೇ ಹುಡುಗರ ಈ ರೀತಿಯ ಕೃತ್ಯಗಳಿಗೆ ಪ್ರೇರಣೆಯಾಗುತ್ತಿದೆ. ನಿರ್ಮಾಪಕರಿಗೆ ನಾನು ಮನವಿ ಮಾಡುತ್ತೇನೆ. ಸಮಾಜದ ಸ್ವಾಸ್ಥ್ಯ ಕೆಡಿಸುವ  ಕೆಲಸವನ್ನು ಮಾಡುವ ಸಿನಿಮಾಗಳನ್ನು ತಯಾರು ಮಾಡಬೇಡಿ ಎಂದು ಹೇಳಿದರು.

ಇಂದು ರೇಷ್ಮೇ ಗೂಡಿಗೂ ಧರ್ಮ ಕಂಟಕ ಹಬ್ಬಿದೆ. ವಿಎಚ್ ಪಿ ಯವರು ರೀಲರ್ಸ್ ಆಗಲು ಸಾಧ್ಯಾನ?  ಇಂತವರಿಂದಲೇ ಸಾವಿರ ರೂಪಾಯಿ ಇದ್ದ ರೇಷ್ಮೆಗೂಡಿನ ಬೆಲೆ ಇಂದು ಮುನ್ನೂರು ಗೆ ಕುಸಿದಿದೆ. ಇವತ್ತು ರೇಷ್ಮೆ ಆಯಿತು ನಾಳೆ ಹುಣಸೇ ಹಣ್ಣಿಗೂ ಬರುತ್ತೆ.  ಹುಣಸೆ ಸಪೋಟವನ್ನು  ಮುಸ್ಲಿಮರು ಖರೀದಿಸುತ್ತಾರೆ. ನಾವು ಹಿಂದೂ ಅಂತ ನಾಮ ಹಾಕಿಕೊಂಡು ಬಂದರೆ ರೈತರ ಹೊಟ್ಟೆ ತುಂಬುತ್ತಾ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X