Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ...

"ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿ ಬಳಸಬೇಕು" ಎಂಬ ಅಮಿತ್‌ ಶಾ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ

"ಗೃಹ ಸಚಿವರು ಮಾತೃಭಾಷೆಯನ್ನು ಬಿಟ್ಟು ಹಿಂದಿಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯ"

ವಾರ್ತಾಭಾರತಿವಾರ್ತಾಭಾರತಿ8 April 2022 3:42 PM IST
share
ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿ ಬಳಸಬೇಕು ಎಂಬ ಅಮಿತ್‌ ಶಾ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ

ʼʼರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆʼʼ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಹಿಂದಿ, ಇಂಗ್ಲೀಷ್, ತಮಿಳು,‌ ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ.

ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ.

"ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ' ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.

ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ.

ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.

ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ.

ತಮಿಳುನಾಡು, ಕೇರಳ,‌ ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.

ಕೇಂದ್ರ ಗೃಹಸಚಿವರ ಈ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ @AmitShah ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ.

ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
1/8#IndiaAgainstHindiImposition

— Siddaramaiah (@siddaramaiah) April 8, 2022

ಹಿಂದಿ, ಇಂಗ್ಲೀಷ್, ತಮಿಳು,‌ ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ.
2/8#IndiaAgainstHindiImposition

— Siddaramaiah (@siddaramaiah) April 8, 2022

ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ.
"ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ' ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.
3/8#IndiaAgainstHindiImposition

— Siddaramaiah (@siddaramaiah) April 8, 2022

ಕೇಂದ್ರದಲ್ಲಿ @BJP4India ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ.
4/8#IndiaAgainstHindiImposition

— Siddaramaiah (@siddaramaiah) April 8, 2022

ಗುಜರಾತಿನಿಂದ ಬಂದಿರುವ @AmitShah ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ.
5/8#IndiaAgainstHindiImposition

— Siddaramaiah (@siddaramaiah) April 8, 2022

ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ @AmitShah ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.
6/8#IndiaAgainstHindiImposition

— Siddaramaiah (@siddaramaiah) April 8, 2022

ತಮಿಳುನಾಡು, ಕೇರಳ,‌ ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.
7/8#IndiaAgainstHindiImposition

— Siddaramaiah (@siddaramaiah) April 8, 2022

ಕೇಂದ್ರ ಗೃಹಸಚಿವ @AmitShah ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು.
8/8#IndiaAgainstHindiImposition

— Siddaramaiah (@siddaramaiah) April 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X