ಬೆಲೆ ಏರಿಕೆಯಿಂದ ಜನ ಜೀವನ ದುಸ್ತರ: ಹರೀಶ್ ಕುಮಾರ್

ಮಂಗಳೂರು : ಕಳೆದೆರೆಡು ವಾರಗಳಿಂದ ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಸಾಮಾನ್ಯ ಜನರ ಜೀವನ ದುಸತಿರವಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ಜನವಿರೋಧಿ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡ್ತುಾ, ಪಂಚರಾಜ್ಯಗಳ ಚುನಾವಣೆ ವೇಳೆ ಮತಗಳನ್ನು ಭದ್ರಪಡಿಸಿಕೊಳ್ಳಲು ಹಾಗೂ ಕಾರ್ಯತಂತ್ರ ರೂಪಿಸಿ ಸುಮ್ಮನಿದ್ದ ಬಿಜೆಪಿ ಸರ್ಕಾರ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್, ಪಿಎನ್ ಜಿ ಮತ್ತು ಸಿಎನ್ ಜಿ ಬೆಲೆಗಳನ್ನು ೧೩೭ ದಿನಗಳ ಕಾಲ ಬದಲಿಸದೇ ಯಥಾಸ್ಥಿತಿಯಲ್ಲಿಟ್ಟಿತ್ತು. ಇದೀಗ ಕಳೆದೆರಡು ವಾರಗಳಿಂದ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಜನರ ಗಮನವನ್ನು ಈ ಜ್ವಲಂತ ಸಮಸ್ಯೆಗಳಿಂದ ಬೇರೆಡೆಗೆ ತಿರುಗಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದ್ದು, ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು. ಪಕ್ಷಕ್ಕೆ ಪ್ರಬಲವಾದ ಬುನಾದಿ ಹಾಕಲು ಎಲ್ಲರೂ ಸಿದ್ಧರಾಗಬೇಕು ಎಂದರು.
ಕೇಂದ್ರರಾಜ್ಯ ಸರ್ಕಾರಗಳ ಬೆಲೆಯೇರಿಕೆ ನೀತಿಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಸಲಿರುವ ಬೃಹತ್ ಪ್ರತಿಭಟನೆ ಕುರಿತಾಗಿ ನಾಯಕರು ಸಲಹೆ, ಸೂಚನೆ ನೀಡಿದರು. ಸಭೆಗೂ ಮುನ್ನ ಅಗಲಿದ ಕಾಂಗ್ರೆಸ್ ನಾಯಕ ಎಂ.ಎಚ್ ಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಮೊಯ್ದೀನ್ ಬಾವ, ಜೆ.ಆರ್.ಲೋಬೊ, ನಾಯಕರಾದ ಶಶಿಧರ್ ಹೆಗ್ಡೆ, ಮಿಥುನ್ ರೈ, ಸದಾಶಿವ ಉಳ್ಳಾಲ್, ಕೃಪಾ ಆಳ್ವ, ಲುಕ್ಮಾನ್ ಬಂಟ್ವಾಳ್, ಶಾಲೆಟ್ ಪಿಂಟೊ, ಶಾಹುಲ್ ಹಮೀದ್, ನಾರಾಯಣ್ ನಾಯ್ಕ್, ಜೋಕ್ಕಿಂ ಡಿಸೋಜಾ, ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕಾಧ್ಯಕ್ಷರು ಗಳು ಉಪಸ್ಥಿತರಿದ್ದರು.