ಕುಂದಾಪುರ: ಆಸ್ತಿ ತೆರಿಗೆ ಪಾವತಿಗೆ ಸೂಚನೆ
ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯ ವಾಸ್ತವ್ಯ, ವಾಣಿಜ್ಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಮಾಲಕರು ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಯನ್ನು ಎ.30ರೊಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆ ಮೇಲೆ ಶೇ.೫ರಷ್ಟು ರಿಯಾಯಿತಿಯನ್ನು ಪಡೆಯಬಹುದಾಗಿದೆ.
ಜೂನ್ ೩೦ರವರೆಗೆ ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿದ್ದು, ಜುಲೈ ೧ರ ನಂತರ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ.೨ರಂತೆ ದಂಡವನ್ನು ವಿಧಿಸಲಾ ಗುವುದು. ಆದ್ದರಿಂದ ಸಾರ್ವಜನಿಕರು ಎ.೩೦ರೊಳಗೆ ಆಸ್ತಿ ತೆರಿಗೆ ಪಾವತಿಸಿ, ವಿನಾಯಿತಿಯ ಸದುಪಯೋಗ ಪಡೆದುಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story