ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಪೊಲಿಸರಿಗೆ ಸೂಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಎ. 8: ಶಾಲೆಗಳಿಗೆ ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಪೊಲಿಸ್ ಅಧಿಕಾರಿಗಳಿಗೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಸುದ್ದಿಗಾರರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು.
ಈ ಕುರಿತು ಎಲ್ಲ ಕಡೆ ತಪಾಸಣೆ ಮಾಡಲು ತಿಳಿಸಿದ್ದು, ಕರೆ ಮಾಡಿದವರ ವಿವರಗಳನ್ನು ಕಲೆ ಹಾಕಿ ಅವರನ್ನು ಬಂಧಿಸಲಾಗುವುದು. ಸುರಕ್ಷತಾ ಕ್ರಮ ಹಾಗೂ ತನಿಖಾ ಕ್ರಮಗಳನ್ನು ಖಂಡಿತವಾಗಿಯೂ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪೋಷಕರು ಧೈರ್ಯವಾಗಿರಲಿ. ಆತಂಕ ಪಡುವ ಅಗತ್ಯವಿಲ್ಲ. ನಾವು ಎಲ್ಲಾ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು. ಯಾವುದೇ ರೀತಿಯ ಆತಂಕಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
Next Story





