Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಕ್ಫ್ ಆಸ್ತಿಗಳಲ್ಲಿ ಹೆಣ್ಣು ಮಕ್ಕಳಿಗಾಗಿ...

ವಕ್ಫ್ ಆಸ್ತಿಗಳಲ್ಲಿ ಹೆಣ್ಣು ಮಕ್ಕಳಿಗಾಗಿ ಶಾಲೆ, ಕಾಲೇಜುಗಳ ಸ್ಥಾಪನೆ: ಮೌಲಾನ ಶಾಫಿ ಸಅದಿ

ವಾರ್ತಾಭಾರತಿವಾರ್ತಾಭಾರತಿ9 April 2022 7:38 AM IST
share
ವಕ್ಫ್ ಆಸ್ತಿಗಳಲ್ಲಿ ಹೆಣ್ಣು ಮಕ್ಕಳಿಗಾಗಿ ಶಾಲೆ, ಕಾಲೇಜುಗಳ ಸ್ಥಾಪನೆ: ಮೌಲಾನ ಶಾಫಿ ಸಅದಿ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿರುವ ವಕ್ಫ್ ನ ಖಾಲಿ ಜಾಗಗಳಲ್ಲಿ ಸ್ಥಳೀಯ ವಕ್ಫ್ ಸಂಸ್ಥೆಗಳ ಮೂಲಕ ಹೆಣ್ಣು ಮಕ್ಕಳಿಗಾಗಿ ಶಾಲೆ ಹಾಗೂ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ. ಮುಹಮ್ಮದ್ ಶಾಫಿ ಸಅದಿ ತಿಳಿಸಿದರು.

ನಗರದ ಕನ್ನಿಂಗ್‌ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್‌ ನ ಕಚೇರಿಯಲ್ಲಿ ಎರಡು ದಿನಗಳ ಕಾಲ ನಡೆದ ಸದಸ್ಯರ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಈಗಾಗಲೆ ಮದ್ರಸಾಗಳನ್ನು ಹೊಂದಿರುವ ವಕ್ಫ್ ನ ಸಂಸ್ಥೆಗಳಲ್ಲಿ ಅವಕಾಶವಿದ್ದರೆ ಅಲ್ಲಿಯೂ ಹೆಣ್ಣು ಮಕ್ಕಳಿಗಾಗಿ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ ಹಿಜಾಬ್ ವಿಚಾರದಿಂದಾಗಿ ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಿದರು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ವಕ್ಫ್ ಆಸ್ತಿಗಳಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯ ನಿಟ್ಟಿನಲ್ಲಿ ಸಮುದಾಯದ ಗಣ್ಯರ ಜೊತೆಯೂ ಸಭೆಯನ್ನು ನಡೆಸಲಾಗುವುದು ಎಂದು ಶಾಫಿ ಸಅದಿ ತಿಳಿಸಿದರು.

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಅವರಿಗೆ ನೈತಿಕವಾಗಿ ಬೆಂಬಲ ನೀಡಲು ವಕ್ಫ್ ಬೋರ್ಡ್ ಸದಸ್ಯರಾದ ಸಂಸದ ಸೈಯದ್ ನಾಸೀರ್ ಹುಸೇನ್, ಅಬ್ದುಲ್ ರಿಯಾಝ್ ಖಾನ್ ದೇಶದ ಹಿರಿಯ ವಕೀಲರೊಂದಿಗೆ ಸಭೆಯನ್ನು ನಡೆಸಿದ್ದಾರೆ. ಇದು ಕಾನೂನು ಹೋರಾಟಕ್ಕೆ ನೆರವು ನೀಡಲಿದೆ ಎಂದು ಅವರು ಹೇಳಿದರು.

ಅವಧಿ ಮುಕ್ತಾಯವಾಗಿರುವ ವಕ್ಫ್ ಸಂಸ್ಥೆಗಳ ಆಡಳಿತ ಸಮಿತಿಗಳನ್ನು ರಮಝಾನ್ ತಿಂಗಳ ಬಳಿಕ ಪುನರ್ ರಚಿಸಲಾಗುವುದು. ಇಮಾಮ್ ಹಾಗೂ ಮುಅದ್ದೀನ್‌ಗಳಿಗೆ ಸರಕಾರದಿಂದ ನೀಡಲಾಗುವ ಗೌರವ ಧನವನ್ನು ಆನ್‌ಲೈನ್ ಮೂಲಕ ಪಾವತಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಅಲ್ಲದೆ, ವಕ್ಫ್ ಬೋರ್ಡ್ ನಲ್ಲಿ ನೋಂದಾಯಿತ ಮಸೀದಿಗಳಲ್ಲಿ ಇಮಾಮ್ ಹಾಗೂ ಮುಅದ್ದೀನ್‌ಗಳಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವವರಿಗೆ ವಕ್ಫ್ ಬೋರ್ಡ್ ವತಿಯಿಂದ ನೀಡುತ್ತಿರುವ ಪಿಂಚಣಿ ಸೌಲಭ್ಯ ಹೆಚ್ಚಿಸಲು ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಶಾಫಿ ಸಅದಿ ಹೇಳಿದರು.

ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಬಗ್ಗೆಯೂ ವಕ್ಫ್ ಬೋರ್ಡ್ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅಲ್ಲದೆ, ಈ ಸಂಬಂಧ ದಿಲ್ಲಿಯಲ್ಲಿ ವಕೀಲರ ತಂಡದ ಜೊತೆಯೂ ಸಭೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಕೆಲವು ಮತೀಯ ಸಂಘಟನೆಗಳು ಹಿಂದೂ ಮುಸ್ಲಿಮರೆಡೆಯಲ್ಲಿ ಸಾಮರಸ್ಯ ಕದಡಿಸುತ್ತಿರುವ ಸದ್ರಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಸಾರುವ "ಇಫ್ತಾರ್ ಸಮಾಗಮ"ವನ್ನು ನಡೆಸಲು ರಾಜ್ಯದ ಎಲ್ಲಾ ವಕ್ಫ್ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಶಾಫಿ ಸಅದಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X