ಅಹಿತಕರ ಘಟನೆ ಹಿನ್ನೆಲೆ: ಮುಳಬಾಗಿಲು ತಾಲೂಕಿನಾದ್ಯಂತ 2 ದಿನ ನಿಷೇಧಾಜ್ಞೆ ಜಾರಿ

ಕೋಲಾರ ಜಿಲ್ಲಾಧಿಕಾರಿ ವೆಂಕಟ್ ರಾಜ
ಕೋಲಾರ, ಎ.9: ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಳಬಾಗಿಲು ತಾಲೂಕಿನಾದ್ಯಂತ 2 ದಿನಗಳ ಕಾಲ ನಿಷೇಧಾಜ್ಞೆ ವಿಧಿಸಲಾಗಿದೆ.
ಮುಳಬಾಗಿಲು ತಾಲೂಕಿನಾದ್ಯಂತ ಇಂದಿನಿಂದ 48 ಗಂಟೆಗಳ ದಿನಗಳ ಕಾಲ ನಿಷೇಧಾಜ್ಞೆ ವಿಧಿಸಿ ಕೋಲಾರ ಜಿಲ್ಲಾಧಿಕಾರಿ ವೆಂಕಟ್ ರಾಜ ಆದೇಶ ಹೊರಡಿಸಿದ್ದಾರೆ. ರಾಮ ನವಮಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





