Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಈ ನಾಡಿನ ಮಣ್ಣಿನ ಮಗ, ಇಲ್ಲ ಎಂದು...

ಟಿಪ್ಪು ಈ ನಾಡಿನ ಮಣ್ಣಿನ ಮಗ, ಇಲ್ಲ ಎಂದು ಹೇಳಲು ಸಾಧ್ಯವೇ: ಎಚ್.ವಿಶ್ವನಾಥ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ9 April 2022 9:20 PM IST
share
ಟಿಪ್ಪು ಈ ನಾಡಿನ ಮಣ್ಣಿನ ಮಗ, ಇಲ್ಲ ಎಂದು ಹೇಳಲು ಸಾಧ್ಯವೇ: ಎಚ್.ವಿಶ್ವನಾಥ್ ಪ್ರಶ್ನೆ

ಮೈಸೂರು: ಟಿಪ್ಪು ಸುಲ್ತಾನ್ ಈ ನಾಡಿನ ಮಣ್ಣಿನ ಮಗ, ಅದನ್ನು ಇಲ್ಲ ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ, ಚರಿತ್ರೆಯನ್ನು ಸುಳ್ಳಾಗಿಲು ಸಾಧ್ಯವೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ. 

ಟಿಪ್ಪು ಈ ನಾಡಿನ ಮಣ್ಣಿನ ಮಗ. ಅದನ್ನು ಸುಳ್ಳು ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಇಂದು ಟಿಪ್ಪು ಬಗ್ಗೆ ಅನೇಕರು ಟೀಕೆ ಮಾಡಬಹುದು.  ಕೆಲವು ವಿಚಾರಗಳಲ್ಲಿ ಬದಲಾವಣೆ ಮಾಡುತ್ತೇವೆ ಎಂದು ಹೇಳಬಹುದು ಆದರೆ ಚರಿತ್ರೆ ಬದಲಿಸಲು ಸಾಧ್ಯವಿಲ್ಲ. ಟಿಪ್ಪು ಈ ದೇಶದ ಎಲ್ಲರ ಹೃದಯದಲ್ಲಿ ಹಚ್ಚ ಹಸಿರಾಗಿ ಉಳಿದಿದ್ದಾರೆ ಎಂದು ತಿಳಿಸಿದರು.

ಪ್ರೊ.ಪಿ.ವಿ.ನಂಜರಾಜ ಅರಸ್ ಅವರು ಟಿಪ್ಪು ಮಾನ್ಯತೆ ಸಿಗದ ಸುಲ್ತಾನ್ ಎಂದಿದ್ದಾರೆ. ಆದರೆ, ಟಿಪ್ಪು ಜಗತ್ತಿನ ಮಾನ್ಯತೆಗೆ ಒಳಗಾದ ಚಕ್ರವರ್ತಿ. ಸೂರ್ಯನ ಪ್ರಕಾಶಕ್ಕೆ ಪರದೆ ಎಳೆಯಲು ಸಾಧ್ಯವೇ? ಆಗಲ್ಲ. ಕಾಮಾಲೆ, ಮತಾಂಧ ಪೊರೆ ಕಳಚಿ ಟಿಪ್ಪು ಸುಲ್ತಾನ್ ಅನ್ನು ಶುದ್ಧ ಶ್ವೇತ ಕಣ್ಣುಗಳಿಂದ ನೋಡಬೇಕಿದೆ ಎಂದರು. 

ಟಿಪ್ಪು ನಾಡಿನ ಮಣ್ಣಿನ ಮಗ. ಇಲ್ಲ ಎಂದು ಹೇಳಲು ಸಾಧ್ಯವೇ? ಚರಿತ್ರೆ ಸುಳ್ಳಾಗಿಸಲು ಸಾಧ್ಯವೇ? 250 ವರ್ಷಗಳ ಹಿಂದೆ ಕೊಡಗಿನಲ್ಲಿ 80 ಸಾವಿರ ಜನರನ್ನು ಟಿಪ್ಪು ಕೊಲೆ ಮಾಡಿದ್ದಾನೇ ಎನ್ನುತ್ತಾರೆ. ಆಗ ಅಷ್ಟು ಜನರಿದ್ದರೇ? ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳಬೇಕು ಎಂದು ನುಡಿದರು. 

ಟಿಪ್ಪು ಸುಲ್ತಾನ್ ಯಾರಿಗೂ ತಲೆಬಾಗಲಿಲ್ಲ. ಮಂಡಿಯೂರಲಿಲ್ಲ. ಪಠ್ಯದಿಂದ ಟಿಪ್ಪು ಚರಿತ್ರೆ ತೆಗೆದ ಮಾತ್ರಕ್ಕೆ ಭಾರತೀಯರ ಹೃದಯ ಸಾಮ್ರಾಜ್ಯದಲ್ಲಿರುವ ಟಿಪ್ಪು ಮರೆಯಾಗುವನೇ? ಟಿಪ್ಪು ಮುಸ್ಲಿಂನಾಗಿ ಹುಟ್ಟಿದ ರಾಷ್ಟ್ರೀಯನಾಗಿ ಬದುಕಿ ಭಾರತಕ್ಕೆ ಗೌರವ ತಂದುಕೊಟ್ಟ. ಇದನ್ನು ಸುಳ್ಳು ಅನ್ನಲಾಗದು ಎಂದರು. 

ಜಗತ್ತಿನಲ್ಲಿ ಅನೇಕ ಕ್ರಾಂತಿಗಳು ನಡೆದಿದೆ. ಪ್ರತಿಯೊಂದು ಕ್ರಾಂತಿಗಳು ಒಂದಲ್ಲಾ ಒಂದು ರೀತಿ ಬದಲಾವಣೆ ತಂದಿದೆ. ಆದರೆ ಯಾವ ಕ್ರಾಂತಿಯೂ ತರಲಾರದಷ್ಟು ಕ್ರಾಂತಿಯನ್ನು ಪುಸ್ತಕಗಳು ತಂದಿದೆ. ನಾವು ಒಪ್ಪಲಿ ಒಪ್ಪದಿರಲಿ ಮಹಾಭಾರತ, ರಾಮಾಯಣ, ಬೈಬಷಲ್, ಕುರಾನ್, ಬುದ್ದನ ಭೋದನೆ   ಅಂಬೇಡ್ಕರ್ ಭೋದನೆಗಳು ಜಗತ್ತಿನ ಜನರನ್ನು ಇನ್ನೂ ಪ್ರಭಾವಗೊಳಿಸಿ ಮುನ್ನಡೆಸುತ್ತಿದೆ.

-ಜಸ್ಟೀಸ್ ಎಚ್.ಎನ್.ನಾಗಮೋಹನ ದಾಸ್, ನಿವೃತ್ತ ನ್ಯಾಯಾಧೀಶ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X