ಅಮಿತ್ ಶಾ ಹೇಳಿಕೆಯಲ್ಲಿ ತಪ್ಪೇನಿದೆ: ಪ್ರಲ್ಹಾದ್ ಜೋಷಿ

ಬೆಂಗಳೂರು, ಎ.9: ಹೊರ ರಾಜ್ಯಗಳಿಗೆ ಹೋದಾಗ ಇಂಗ್ಲಿಷ್ ಬದಲು ಹಿಂದಿ ಬಳಸುವಂತೆ ಅಮಿತ್ ಶಾ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ ಪ್ರಶ್ನಿಸಿದರು.
ಶನಿವಾರ ನಗರದ ಗಾಂಧಿ ಭವನದಲ್ಲಿ ಭಾರತೀಯ ವಿಕಾಸ ಕೇಂದ್ರ- ಕರ್ನಾಟಕ ಹಮ್ಮಿಕೊಂಡಿದ್ದ ‘ಒಂದು ದೇಶ- ಒಂದು ಚುನಾವಣೆ' ಕುರಿತ ಸಂವಾದದಲ್ಲಿ ಅವರು ಮಾತನಾಡಿದರು.
ಹೊರ ರಾಜ್ಯಗಳಿಗೆ ಹೋದಾಗ ಇಂಗ್ಲಿಷ್ ಬದಲು ಹಿಂದಿ ಬಳಸುವಂತೆ ಅಮಿತ್ ಶಾ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಅಲ್ಲದೆ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಮೊಘಲರಂತೆ ಆಂಗ್ಲರೂ ನಮ್ಮ ದೇಶವನ್ನು ಹಾಳು ಮಾಡಿದ್ದಾರೆ. ನೂರಿನ್ನೂರು ವರ್ಷಗಳ ಇತಿಹಾಸವಿರುವ ಇಂಗ್ಲಿಷ್ ಭಾಷೆಗೆ ಏಕಿಷ್ಟು ಒತ್ತು ಕೊಡಬೇಕು ಎಂದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೇ ಆದ್ಯತೆ ಸಿಗಲಿದೆ. 70 ವರ್ಷ ದೇಶವನ್ನು ಆಳಿದವರು ತಾಂತ್ರಿಕ ಶಿಕ್ಷಣದಲ್ಲಿ ಸ್ಥಳೀಯ ಭಾಷೆಗೆ ಮನ್ನಣೆ ನೀಡಿರಲಿಲ್ಲ. ನಾವು ಆ ಕೆಲಸ ಮಾಡಿದ್ದೇವೆ ಎಂದರು.
Next Story





