Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ...

ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ: ಸಿದ್ದರಾಮಯ್ಯ ಪ್ರಶ್ನೆ

ಧಾರವಾಡದಲ್ಲಿ ಮುಸ್ಲಿಮ್ ವರ್ತಕರ ಅಂಗಡಿ ಧ್ವಂಸ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 April 2022 1:53 PM IST
share
ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: 'ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಮ್ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು,  ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ  ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ? ಎಂದು ಪ್ರಶ್ನಿಸಿದ್ದಾರೆ. 

'ಧಾರವಾಡದಲ್ಲಿ ನಡೆದ ಹಲ್ಲೆ ಕೇವಲ ಮುಸ್ಲಿಮ್ ವ್ಯಾಪಾರಿಗಳ ಮೇಲೆ ನಡೆದದ್ದಲ್ಲ, ಅದು ಅವರು ಮಾರಾಟ ನಡೆಸುತ್ತಿದ್ದ ಕಲ್ಲಂಗಡಿ ಬೆಳೆಯುವ ರೈತರ ಮೇಲೆ ಕೂಡಾ ನಡೆದಿರುವ ದೌರ್ಜನ್ಯವೂ ಆಗಿದೆ. ಈ ಗೂಂಡಾಗಳನ್ನು ಹೀಗೆ ಸ್ವತಂತ್ರವಾಗಿ ಬಿಟ್ಟರೆ ಇವರು ಎಲ್ಲರ ಮನೆ ಬಾಗಿಲು ತಟ್ಟಲಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ.

'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಸರ್ಕಾರವನ್ನೇ ಸಂಘ ಪರಿವಾರಕ್ಕೆ ಔಟ್ ಸೋರ್ಸ್ ಮಾಡಿ ಅಲ್ಲಿನ ಪುಂಡರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡ ಹಾಗೆ ಕಾಣುತ್ತಿದೆ. ರಾಜ್ಯದ ಇತಿಹಾಸದಲ್ಲಿ ಇದೊಂದು ಶಾಶ್ವತ ಕಳಂಕ' ಕಿಡಿಗಾರಿದ್ದಾರೆ.

'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಇಲ್ಲವೇ ಪಕ್ಷದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಸರ್ಕಾರವನ್ನು ಸಂಘಪರಿವಾರಕ್ಕೆ ಅಡವಿಟ್ಟರೆ ತಮ್ಮ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಕನಸುಕಾಣುತ್ತಿದ್ದಾರೆ. ಈ ಪುಂಡಾಟಿಕೆ ಅವರ ಕುರ್ಚಿಯನ್ನೂ ಕಿತ್ತುಕೊಳ್ಳಲಿದೆ ಎನ್ನುವುದು ಅವರಿಗ ತಿಳಿದಿಲ್ಲ' ಎಂದು ಹೇಳಿದರು.

'ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬೊಮ್ಮಾಯಿಯವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ'.

'ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದ ಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು'.

'ಇದು ಮುಖ್ಯಮಂತ್ರಿಗಳೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ,ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ರಾಜ್ಯದಲ್ಲಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ದಕ್ಕೆ ದಾರಿಮಾಡಿಕೊಟ್ಟಿದೆ'.

'ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮದಾರ್ ಶಹಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ'.

'ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ. ಮುಖ್ಯಮಂತ್ರಿಗಳು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ' ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ ಹೇಳಿಕೊಂಡು ಬರುತ್ತಿರುವ ‘ರಾಮ ರಾಜ್ಯ’ದ ಒಂದು ಚಿತ್ರವನ್ನು ರಾಮ ನವಮಿಯ ಹಿನ್ನೆಲೆಯಲ್ಲಿ ಧಾರವಾಡದ ಶ್ರೀರಾಮಸೇನೆಯ ಗೂಂಡಾಗಳು ಜಗತ್ತಿನ ಮುಂದೆ ಇಟ್ಟಿದ್ದಾರೆ. ಇಂತಹ ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?
2/10#ArrestSanghiGoons pic.twitter.com/LyPOe7oR8t

— Siddaramaiah (@siddaramaiah) April 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X