ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕಾರ್ಕಳ: ಕಾರ್ಕಳ ತಾಲೂಕು ಕಸಬ ಗ್ರಾಮದ ಅತ್ತೂರು ಬಳಿ ಆಹಾರ ಅರಸಿಕೊಂಡು ಬಂದ ಚಿರತೆಯೊಂದು ರವಿವಾರ ಬೆಳಗ್ಗಿನ ಜಾವ ಚಿರತೆಯೊಂದು ವಿನ್ಸೆಂಟ್ ನವೀನ್ ಕ್ಯಾಸ್ತಲಿನೋ ಎಂಬವರ ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆಯ ಸಹಕಾರದೊಂದಿಗೆ ಚಿರತೆಯನ್ನು ರಕ್ಷಿಸಲಾಗಿದೆ.
ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್ ರವರ ನೇತೃತ್ವದಲ್ಲಿ ಕಾರ್ಕಳ ವಲಯದ ಅರಣ್ಯ ಕಛೇರಿ ಸಿಬ್ಬಂದಿಯವರು ಚಿರತೆಯನ್ನು ಬಾವಿಯಿಂದ ಮೇಲೆತ್ತಿ ರಕ್ಷಿಸಿದರು. ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ ಸುರಕ್ಷಿತ ಪ್ರದೇಶಕ್ಕೆ ಬಿಡಲಾಗುವುದೆಂದು ಕಾರ್ಕಳ ವಲಯ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದರು.
ಸದ್ರಿ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ಚಂದ್ರ, ಹುಕ್ರಪ್ಪ ಗೌಡ, ರಾಘವೇಂದ್ರ ಶೆಟ್ಟಿ, ಚಂದ್ರಕಾಂತ್ ಪೋಳ್, ಅರಣ್ಯ ರಕ್ಷಕರಾದ ಎ.ಡಿ ಪೊನ್ನಪ್ಪ, ಭಾಸ್ಕರ, ಶ್ರೀಧರ್ ನರೇಗಲ್, ಪ್ರಕಾಶ್, ಮಹಾಂತೇಶ್ ಎಚ್ ಗೋಡಿ, ಬಾಬು ಪೂಜಾರಿ, ಶಮೀಮ್, ಬಾಬುಪೂಜಾರಿ ಯಾನೆ ಪ್ರಕಾಶ್, ಶ್ರೀಧರ ಪೂಜಾರಿ ಹಾಗೂ ಸ್ಥಳೀಯರಾದ ಮಾಜಿ ಎ.ಪಿ.ಎಂಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ಹಾಗೂ ಇನ್ನಿತರರು ಭಾಗವಹಿಸಿದ್ದಾರೆ.
