ಕೋಟ: ಕಾರು -ಬೈಕ್ ಢಿಕ್ಕಿ; ಸವಾರ ಮೃತ್ಯು
ಕೋಟ, ಎ.10: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕೋಟ ಮೂರುಕೈ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.9ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಪ್ರವೀಣ್ ಎಂದು ಗುರುತಿಸಲಾಗಿದೆ. ಕೋಟ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಹಾಗೂ ಪ್ರವೀಣ್ ಸುಮಾರು 15ಅಡಿ ದೂರಕ್ಕೆ ಎಸೆಯಲ್ಪಟ್ಟು ಬಿದ್ದರು.
ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರವೀಣ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತದಿಂದ ಕಾರು ಜಖಂ ಗೊಂಡಿದ್ದು ಚಾಲಕ ಕೃಷ್ಣಮೂರ್ತಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story