ಧಾರವಾಡ ಮುಸ್ಲಿಮ್ ವರ್ತಕರ ಅಂಗಡಿ ಧ್ವಂಸ ಪ್ರಕರಣ: ಶ್ರೀರಾಮ ಸೇನೆ ಕಾರ್ಯಕರ್ತ ವಶಕ್ಕೆ

ಧಾರವಾಡ: ಇಲ್ಲಿನ ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಹೊರಗಡೆ ಇರುವ ಮುಸ್ಲಿಮರಿಗೆ ಸೇರಿದ ಅಂಗಡಿಗಳನ್ನು ಸಂಘಪರಿವಾರ ಕಾರ್ಯಕರ್ತರು ಬಲವಂತವಾಗಿ ತೆರವುಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಶ್ರೀರಾಮ ಸೇನೆ ಕಾರ್ಯಕರ್ತ ಮಹಾಲಿಂಗ ಐಗಳಿ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ತಿಳಿದು ಬಂದಿದೆ.
ಶನಿವಾರ ಮಧ್ಯಾಹ್ನ ವೇಳೆ ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ನಾಲ್ಕು ಅಂಗಡಿಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರ ಗುಂಪೊಂದು ತೆರವುಗೊಳಿಸಿದ್ದಲ್ಲದೆ ಕಲ್ಲಂಗಡಿ ಹಣ್ಣಿನ ವ್ಯಾಪಾರಿಯ ತಳ್ಳುಗಾಡಿಯನ್ನು ಧ್ವಂಸಗೊಳಿಸಿ ಅದರಲ್ಲಿದ್ದ ಕಲ್ಲಂಗಡಿಗಳನ್ನು ರಸ್ತೆಗೆ ಚೆಲ್ಲಿ ನಾಶಪಡಿಸಿದ್ದರು. ಈ ಸಂಬಂಧ ಅಂಗಡಿ ಮಾಲಕ ನಬಿಸಾಬ್ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Next Story





