ಹಿರಿಯಡ್ಕ: ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಹಿರಿಯಡ್ಕ, ಎ.10: ಹಿರಿಯಡ್ಕ ನವ್ಯೋದಯ ಫ್ರೆಂಡ್ಸ್ ಕ್ಲಬ್ ವತಿಯಿಂದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಹಕಾರದೊಂದಿಗೆ ಹಿರಿಯಡ್ಕ ಮೈದಾನದಲ್ಲಿ ಹಮ್ಮಿಕೊಳ್ಳಲಾದ ವಾಲಿಬಾಲ್ ಪಂದ್ಯಾಟಕ್ಕೆ ರವಿವಾರ ಚಾಲನೆ ನೀಡಲಾಯಿತು.
ಪಂದ್ಯಾಟವನ್ನು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಪ್ರಸನ್ನ ಶೆಟ್ಟಿ ಕೊಡಂದಬೆಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸ್ಥಳೀಯ ಉದ್ಯಮಿಗಳಾದ ದಿನೇಶ್ ಪುತ್ರನ್ ಪಡ್ದಮ್, ಶಾಜಿ ಐ.ಪಿ., ರಾಘವೇಂದ್ರ ನಾಯಕ್, ಕ್ಲಬ್ನ ಅಧ್ಯಕ್ಷ ನರಸಿಂಹ ಕಾಮತ್ ಉಪಸ್ಥಿತರಿದ್ದರು. ಕ್ಲಬ್ ಕಾರ್ಯದರ್ಶಿ ಶರತ್ ಚೆನ್ನಿ ಕಾರ್ಯಕ್ರಮ ನಿರೂಪಿಸಿದರು.
Next Story





