Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲ ಕ್ಷೇತ್ರಗಳಲ್ಲಿ ಜಾನಪದ ಉತ್ಸವ:...

ಎಲ್ಲ ಕ್ಷೇತ್ರಗಳಲ್ಲಿ ಜಾನಪದ ಉತ್ಸವ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ10 April 2022 10:44 PM IST
share
ಎಲ್ಲ ಕ್ಷೇತ್ರಗಳಲ್ಲಿ ಜಾನಪದ ಉತ್ಸವ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಎ.10: ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜಾನಪದ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ಪದ್ಮನಾಭನಗರ ಜಾನಪದ ಉತ್ಸವ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿ, ಕರ್ನಾಟಕದಲ್ಲಿ ಬಿಎಸ್.ಯಡಿಯೂರಪ್ಪ ಅವರ ದಿಟ್ಟ ಕ್ರಮದಿಂದ ಕೋವಿಡ್ ನ್ನು ಮೆಟ್ಟಿ ನಿಲ್ಲಲ್ಲು ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಾನಪದ ಉತ್ಸವವನ್ನು ಎರಡು ವರ್ಷಗಳ ನಂತರ ಹಮ್ಮಿಕೊಳ್ಳಲು ಸಾಧ್ಯವಾಗುತ್ತಿದೆ ಎಂದರು.

ಕರ್ನಾಟಕದಲ್ಲಿ ಜಾನಪದಕ್ಕೆ ಕನ್ನಡ ಭಾಷೆ ಅತ್ಯಂತ ಶ್ರೀಮಂತವಾಗಿದೆ. ಬೆಂಗಳೂರಿನ ಸುಶಿಕ್ಷಿತ ಜನರಿರುವ ಪದ್ಮನಾಭನಗರ ಕ್ಷೇತ್ರದಲ್ಲಿ ಜಾನಪದ ಜಾತ್ರೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಬಂದಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಗೆ ಸಾಕ್ಷಿ. ಭಾರತದಲ್ಲಿ ಕನ್ನಡಕ್ಕೆ ಅಗ್ರಮಾನ್ಯ ಸ್ಥಾನವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ಭಾರತದಲ್ಲಿ ಅತ್ಯಂತ ಪ್ರಾಚೀನ ಭಾಷೆ ಕನ್ನಡ. ಹಲವಾರು ಯುಗಗಳು ಕಳೆದರೂ ಕೂಡ ಕನ್ನಡ ಗಟ್ಟಿಯಾಗಿ ನಿಂತಿದೆ ಎಂದರು.  

ಕನ್ನಡ ಭಾಷೆಯ ಶಕ್ತಿ ಜಾನಪದದಿಂದ ಬರುತ್ತದೆ. ಜನರ ಭಾವನೆಯ ಅಭಿವ್ಯಕ್ತಿ ಜಾನಪದ. ಹೃದಯದಿಂದ ಬರುವ ನುಡಿಗಳು ಜಾನಪದ. ದಕ್ಷಿಣದ ಮಾದೇಶ್ವರ, ಉತ್ತರದ ಶಿಶುನಾಳ ಶರೀಫರ ಶ್ರೀಮಂತಿಕೆ ಒಗ್ಗೂಡಿ ಇಂದು ಸಮ್ಮಿಲನವಾಗಿದೆ ಎಂದರು.

ಇಡೀ ವಿಶ್ವದಲ್ಲಿ ಜಾನಪದ ವಿಶ್ವವಿದ್ಯಾಲಯ ಇರುವುದು ಹಾವೇರಿಯ ಶಿಗ್ಗಾಂವಿಯಲ್ಲಿ ಮಾತ್ರ. ಅದನ್ನು ಬಿ.ಎಸ್.ಯಡಿಯೂರಪ್ಪನವರು ಕೊಡುಗೆಯಾಗಿ ನೀಡಿದ್ದಾರೆ. ಇಂದು ಜಾನಪದವನ್ನು ಉಳಿಸುವ ಕೆಲಸವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯ ಹಾಗೂ ಹಾವೇರಿಯ ಜಾನಪದ ವಿಶ್ವವಿದ್ಯಾಲಯವನ್ನು ಉಳಿಸುವ ಕೆಲಸವನ್ನು ನಾವು ಮಾಡಬೇಕು. ಇವುಗಳನ್ನು ಉಳಿಸಿದರೆ ನಮ್ಮ ಮುಂದಿನ ಪೀಳಿಗೆಗೆ ಕನ್ನಡದ ಮಹತ್ವ ತಿಳಿಯುತ್ತದೆ ಎಂದರು.

ನಾಗರೀಕತೆಯೇ ಸಂಸ್ಕೃತಿಯಲ್ಲ. ನಾವೇನಾಗಿದ್ದೇವೆಯೋ ಅದು ಸಂಸ್ಕೃತಿ. ಬೆಂಗಳೂರಿನಲ್ಲಿ ಜಾನಪದಕ್ಕೆ ಇಷ್ಟು ದೊಡ್ಡ  ಪ್ರೊತ್ಸಾಹ ಸಿಕ್ಕಿರುವುದು ಸಂತಸದ ಸಂಗತಿ. ನಮ್ಮ ಭಾಷೆ ಸಂಸ್ಕೃತಿಯ ಬಗ್ಗೆ ಸದಾ ಕಾಲ ಅಭಿಮಾನ ವಿದ್ದಾಗ ಮಾತ್ರ ಕನ್ನಡ ನಾಡಿನ ಭವಿಷ್ಯ ಉಜ್ವಲವಾಗುತ್ತದೆ. ಇದನ್ನು ಎಲ್ಲಾ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದರು. ಯಾವುದೇ ಸಂದರ್ಭದಲ್ಲಿಯೂ ಜಾನಪದ ಕ್ಷೀಣಿಸಲು ಬಿಡುವುದಿಲ್ಲ. ಜಾನಪದವನ್ನು ಇನ್ನಷ್ಟು ಶ್ರೀಮಂತಗೊಳಿಸಲು ಎಲ್ಲಾ ರೀತಿಯ ¨ಬೆಂಬಲವನ್ನು ನೀಡಲಾಗುವುದು ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X