Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರ್ಕಾರದ ವತಿಯಿಂದ 'ಸಮಾನತಾ ದಿನಾಚರಣೆ':...

ಸರ್ಕಾರದ ವತಿಯಿಂದ 'ಸಮಾನತಾ ದಿನಾಚರಣೆ': ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ11 April 2022 1:12 PM IST
share
ಸರ್ಕಾರದ ವತಿಯಿಂದ ಸಮಾನತಾ ದಿನಾಚರಣೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಎ. 11: ಮುರುಘಾ ಶರಣರ ಜನ್ಮದಿನವನ್ನು 'ಸಮಾನತಾ ದಿನ'ವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದುರ್ಗದ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲಾಗಿ ಹಮ್ಮಿಕೊಂಡಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಹೊಸ ಮನ್ವಂತರ ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ: ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚಾರಣೆಯನ್ನು ಸಮಾನತಾ ದಿನ ಎಂದು ಆಚರಿಸಲಾಗುತ್ತಿರುವುದು ಸೂಕ್ತವಾಗಿದೆ. ಬಸವಾದಿ ಶರಣರ ಮಾತುಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಸಭೆ ಸಮಾರಂಭಗಳಲ್ಲಿ ಕೇಳಿಬರುವ ಮಾತು. 12 ನೇ  ಶತಮಾನದಲ್ಲಿ ಸಮಾನತೆ ತರುವುದು, ಲಿಂಗಬೇಧ, ಮೂಢ ನಂಬಿಕೆಗಳನ್ನು ತೊಡೆದುಹಾಕುವುದಕ್ಕಾಗಿ ಹೋರಾಟ ನಡೆಯಿತು.  ಅವರ ವಿಚಾರ ಇಂದಿಗೂ ಪ್ರಸ್ತುತ ಎಂದರೆ ಆ ಎಲ್ಲಾ ಅನಿಷ್ಟಗಳು ಇಂದಿಗೂ ಪ್ರಚಲಿತವಾಗಿವೆ ಎಂಬ ಚಿಂತನೆ ಮೂಡುತ್ತದೆ. ಸಮಾಜ ಪರಿವರ್ತನೆಗೆ  ನಿರಂತರವಾದ ಶುದ್ದೀಕರಣದ ಅಗತ್ಯವಿದೆ. ನಮ್ಮ ಕನ್ನಡ ನಾಡಿನಲ್ಲಿ ಈ ದಿಟ್ಟ ಹೆಜ್ಜೆಯನ್ನು ಇಟ್ಟಿರುವುದು ಮುರುಘಾ ಶರಣರು. ಹಲವಾರು ಟೀಕೆ ಟಿಪ್ಪಣಿಗಳು ಬಂದಾಗಲೂ ಬಸವತತ್ವವನ್ನು ಎಂದಿಗೂ ಕೈಬಿಡುವುದಿಲ್ಲ ಎನ್ನುವ ದಿಟ್ಟ ನಿಲುವಿನಿಂದ  ಸಮಾಜದ ಎಲ್ಲಾ ವರ್ಗದ ಜನರಿಗೆ, ಧ್ವನಿ ಇಲ್ಲದವರಿಗೆ ಧ್ವನಿ, ಗುರುತಿಲ್ಲದವರಿಗೆ ಗುರುತು ನೀಡಲು ಹಾಗೂ ಎಲ್ಲಾ ಸಮಾಜದವರಿಗೆ ಗುರು ಪೀಠ ಸ್ಥಾಪನೆ ಮಾಡುವ ಮೂಲಕ ಹೊಸ ಮನ್ವಂತರವನ್ನು ತಂದಿದ್ದಾರೆ ಎಂದರು. 

 ಕಾಕತಾಳೀಯವೆಂದರೆ ಬಸವಣ್ಣನವರು ಪರಿವರ್ತನೆಯ ಕಾಲ 12 ನೇ ಶತಮಾನ, ಇಂದು  ಮುರುಘಾ ಶರಣರು ಪರಿವರ್ತನೆ ಮಾಡುವ ಕಾಲ 21 ನೇ ಶತಮಾನ. 12 ನೇ ಶತಮಾನದಲ್ಲಿ ಮಾಡಿದ್ದನ್ನು  21 ನೇ ಶತಮಾನದಲ್ಲಿ ಮಾಡುವ ಅವಶ್ಯಕತೆ ಕಂಡು ಮುರುಘಾ ಶರಣರು ಇದನ್ನು  ಮಾಡುತ್ತಿದ್ದಾರೆ.  12 ನೇ ಶತಮಾನದಲ್ಲಿಯೂ  ಇದೇ ಪರಿಸ್ಥಿತಿ ಇತ್ತು. ಸಾಕಷ್ಟು ಪ್ರತಿರೋಧದ ನಡುವೆ ಪರಿವರ್ತನೆ ಆಯಿತು. 21 ನೇ ಶತಮಾನದಲ್ಲಿಯೂ ಅಷ್ಟೇ ಪ್ರತಿರೋಧ ಇದೆ. ಸರ್ವರಿಗೂ ಸಮಾನತೆ ನೀಡುವ ತತ್ವವನ್ನು  ನಿರಂತರವಾಗಿ ಸಮಾಜದಲ್ಲಿ ಬೇರೂರಬೇಕೆಂಬ ಸಂಕಲ್ಪವನ್ನು ಈ ಸಮಾಜದಲ್ಲಿ 21 ನೇ ಶತಮಾನದಲ್ಲಿ ಮಾಡುವುದು ಬಹಳ ದೊಡ್ಡ ಸವಾಲು. ಆ ಸವಾಲನ್ನು ಅತ್ಯಂತ ಯಶಸ್ವಿಯಾಗಿ ಎದುರಿಸಿ ಅದರ ಬೀಜಾಂಕುರ ಮಾಡಿರುವುದು ಮುರುಘಾ ಶರಣರು ಎಂದು ಭಕ್ತಿ ಮತ್ತು ಹೆಮ್ಮೆಯಿಂದ ಹೇಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕನಕಗುರು ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಚಿತ್ರದುರ್ಗದ ಮುರುಘಾ ಶರಣರು, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,  ಇಂಧನ ಸಚಿವ ವಿ ಸುನಿಲ್ ಕುಮಾರ್, ಶಾಸಕ ಪಾಟೀಲ ತೇಲ್ಕೂರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,  ಮತ್ತು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X