Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾನೂನು ಕೈಗೆತ್ತಿಕೊಂಡರೆ, ಹಿಂಸೆಗೆ...

ಕಾನೂನು ಕೈಗೆತ್ತಿಕೊಂಡರೆ, ಹಿಂಸೆಗೆ ಇಳಿದರೆ ಸರಕಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ ಜಿಲ್ಲೆಯಲ್ಲಿ ಸಿಎಂ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ11 April 2022 1:31 PM IST
share
ಕಾನೂನು ಕೈಗೆತ್ತಿಕೊಂಡರೆ, ಹಿಂಸೆಗೆ ಇಳಿದರೆ ಸರಕಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ : ನಮ್ಮದು ಸಂವಿಧಾನ ಬದ್ಧವಾಗಿ ರಚಿಸಿರುವ ಸರಕಾರ. ಕಾನೂನು ಸುವ್ಯವಸ್ಥೆ ಹಾಗೂ ಎಲ್ಲರನ್ನು ಸಮಾನ ದೃಷ್ಠಿಕೋನ ಇಟ್ಟುಕೊಂಡು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಲು ಯಾವುದೇ ತೊಂದರೆ ಇಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಮತ್ತು ಹಿಂಸೆಗೆ ಇಳಿದರೆ ನಮ್ಮ ಸರಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ನಗರ ಆದಿಉಡುಪಿ  ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಶಾಂತಿಯುತ ಹಾಗೂ ಪ್ರಗತಿಪರ ರಾಜ್ಯ. ಅದನ್ನು ಯಾವ ರೀತಿ ಕಾಪಾಡಬೇಕು ಎಂಬುದು ನಮಗೆ ಗೊತ್ತಿದೆ. ನಾವು ಮಾಡುತ್ತಿದ್ದೇವೆ ಮತ್ತು ಮಾಡಿ ತೋರಿ ಸುತ್ತೇವೆ ಎಂದರು.

ರಾಜ್ಯದ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಮೌನವಾಗಿರುವುದಾಗಿ ವಿಪಕ್ಷಗಳ ಆರೋಪದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಮ್ಮ ಆ್ಯಕ್ಷನ್‌ಗಳೇ ಮಾತನಾಡುತ್ತದೆ. ನಾವು ಮಾತನಾಡಬಾರದು. ನಮ್ಮ ಕೆಲಸಗಳೇ ಮಾತನಾಡುತ್ತವೆ. ಯಾವ ಯಾವ ಸಂದರ್ಭದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನಾವು ಮಾಡುತ್ತೇವೆ. ಇವರಿಂದ ನಾವು ಏನು ಕಲಿಯಬೇಕಾಗಿಲ್ಲ ಎಂದು ತಿಳಿಸಿದರು.

ಇವರು ಹಲವು ಹಿಂದೂ ಯುವಕರ ಕೊಲೆ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿರುವ ಸಂಸ್ಥೆಗಳ ಹಲವರ ಮೇಲಿನ ಕೇಸ್‌ಗಳನ್ನು ಸರಕಾರದ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಕೈಬಿಟ್ಟಿದ್ದಾರೆ. ಆಗ ಎಲ್ಲಿ ಇತ್ತು ಇವರ ಕರ್ತವ್ಯ ಪ್ರಜ್ಞೆ? ಇವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದರು. ಆ ಸಂಸ್ಥೆಗಳನ್ನು ನಿಷೇಧಿಸುತ್ತೀರಾ ಎಂಬ ಪ್ರಶ್ನೆಗೆ, ಅದೆಲ್ಲ ಮುಂದಿನ ದಿನಗಳಲ್ಲಿ ನಿಮಗೆ ಗೊತ್ತಾಗುತ್ತದೆ ಎಂದರು.

ಲವ್ ಜಿಹಾದ್ ಕುರಿತು ಹಿಂದೂ ಕಾರ್ಯಪಡೆ ಮಾಡಲು ಹೊರಟಿದ್ದಾರೆ,  ಯಾಕೆ ಸರಕಾರಕ್ಕೆ ಆಗುತ್ತಿಲ್ಲ ಎಂದು ಅವರು ಮಾಡುತ್ತಿದ್ದಾರ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ರೀತಿ ತಪ್ಪು ವಿಶ್ಲೇಷಣೆ ಮಾಡುವುದು ಸರಿಯಲ್ಲ. ಯಾರು ಬೇಕಾದರು ಅವರವರು ರಕ್ಷಣೆ ಮಾಡುತ್ತಾರೆ. ಆದರೆ ಎಲ್ಲದಕ್ಕೂ ಕಾನೂನು ಇದೆ. ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಘಟನೆಗಳಿಗೂ ಕಾನೂನು ಇದೆ. ಕೆಲವು ಕಾನೂನುಗಳನ್ನು ಹಿಂದಿನ ಸರಕಾರಗಳೇ ಮಾಡಿರುವುದು. ನಾವು ಹೊಸ ಕಾನೂನು ಮಾಡುತ್ತಿಲ್ಲ. ಆ ಕಾನೂನು ಪ್ರಕಾರವೇ ಎಲ್ಲವೂ ನಡೆಯುತ್ತದೆ. ಅದನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಭರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X