ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕುಂದಾಪುರದಲ್ಲಿ ನಡೆಯಲಿರುವ ಉಡುಪಿ ಜಿಲ್ಲಾ ೧೫ನೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ.ವಿ.ನಾವುಡ ಅವರನ್ನು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಂಗಳೂರಿನ ಅವರ ಸ್ವಗೃಹದಲ್ಲಿ ವಿದ್ಯುಕ್ತವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಪ್ರೊ.ನಾವಡ ಅವರ ಪತ್ನಿ ಹಿರಿಯ ಲೇಖಕಿ ಡಾ.ಗಾಯತ್ರಿ ನಾವಡ, ಗೌರವ ಕಾರ್ಯದರ್ಶಿ ಗಳಾದ ಸುಬ್ರಮಣ್ಯ ಶೆಟ್ಟಿ, ಕೋಶಾಧ್ಯಕ್ಷ ಮನೋಹರ ಪಿ., ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.
Next Story