Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ...

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆ ಕುರಿತಂತೆ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‍ನಿಂದ ವಜಾ

ವಾರ್ತಾಭಾರತಿವಾರ್ತಾಭಾರತಿ11 April 2022 7:06 PM IST
share
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆ ಕುರಿತಂತೆ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‍ನಿಂದ ವಜಾ

ಬೆಂಗಳೂರು, ಎ.11: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) ಚುನಾವಣೆ ಕುರಿತಂತೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶಿಸಿದೆ. 

ನಿಯಮಾವಳಿ ಪ್ರಕಾರ ನ್ಯಾಯಸಮ್ಮತವಾಗಿ ಚುನಾವಣೆ ನಡೆದಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಜತೆಗೆ ಚುನಾವಣಾ ಫಲಿತಾಂಶಕ್ಕೆ ನೀಡಿದ್ದ ತಡೆಯಾಜ್ಞೆಯೂ ತೆರವಾದಂತೆಯಾಗಿದೆ.

ಕೆಯುಡಬ್ಲ್ಯೂಜೆ ಚುನಾವಣೆ ಕ್ರಮಬದ್ದವಾಗಿ ನಡೆದಿಲ್ಲ. ಕರ್ನಾಟಕ ಟ್ರೇಡ್ ಯುನಿಯನ್ ಎಲೆಕ್ಷನ್ (ಮಾಡೆಲ್ ರೂಲ್ಸ್) 1953 ಪ್ರಕಾರ ಚುನಾವಣೆ ಮಾಡಿಲ್ಲ. ಚುನಾವಣಾಧಿಕಾರಿ ನೇಮಕ ಸಕ್ರಮವಾಗಿಲ್ಲ. ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಅಜೆಂಡಾ ಹಾಕಿಲ್ಲ ಎಂಬಿತ್ಯಾದಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು.

ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಆಗಿರುವ ಕರ್ನಾಟಕ ಯುನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಹೆಸರು ಬಿಟ್ಟು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಎಂಬ ಹೆಸರಿನಲ್ಲಿ ಚುನಾವಣೆ ನಡೆಸಿರುವುದು ಸರಿಯಲ್ಲ ಎಂದು ತಕರಾರು ಸಲ್ಲಿಸಲಾಗಿತ್ತು.

ಚುನಾವಣಾ ತಕರಾರು ಎತ್ತಿದ್ದ ಅಮರನಾಥ್, ಬಂಗ್ಲೆ ಮಲ್ಲಿಕಾರ್ಜುನ ಮತ್ತಿತರರು, ಚುನಾವಣಾ ಕ್ರಮವನ್ನು ಆಕ್ಷೇಪಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಚುನಾವಣಾಧಿಕಾರಿಗಳು ಮತ್ತು ಕಾರ್ಮಿಕ ಇಲಾಖೆಯನ್ನು ಪ್ರತಿವಾದಿಯನ್ನಾಗಿಸಿ ಹೈಕೋರ್ಟ್‍ನಲ್ಲಿ ದಾವೆ ಹೂಡಿದ್ದರು.

ಚುನಾವಣೆಗೆ ತಡೆ ನೀಡಲು ನಿರಾಕರಿಸಿದ್ದ ಹೈಕೋರ್ಟ್ ಚುನಾವಣಾ ಫಲಿತಾಂಶ ಪ್ರಕಟ ಮಾಡದಂತೆ ಮಧ್ಯಂತರ ತೀರ್ಪು ನೀಡಿತ್ತು. ಹೀಗಾಗಿ, 2022ರ ಫೆ.27ಚುನಾವಣೆ ನಡೆದರೂ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿರಲಿಲ್ಲ.

ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಕೆಯುಡಬ್ಲ್ಯೂಜೆ ಚುನಾವಣಾ ಪ್ರಕ್ರಿಯೆಯು ಕ್ರಮಬದ್ಧವಾಗಿ ನಡೆದಿರುವುದನ್ನು ಎತ್ತಿ ಹಿಡಿದಿದೆ. ಅರ್ಜಿದಾರರ ತಕರಾರುಗಳು ಊರ್ಜಿತವಲ್ಲ ಎಂದು ನಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಅವರಿದ್ದ ನ್ಯಾಯಪೀಠ ಹೇಳಿದೆ. ಕಳೆದ ಒಂದೂವರೆ ತಿಂಗಳಿಂದ ಚುನಾವಣೆಗೆ ಇದ್ದ ಮಧ್ಯಂತರದ ತಡೆಯಾಜ್ಞೆ ತೆರವಾಗಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರತಿಕ್ರಿಯಿಸಿದ್ದಾರೆ.

ಏಳು ಸಾವಿರ ಸದಸ್ಯರು: 31 ಜಿಲ್ಲಾ ಘಟಕ ಮತ್ತು ರಾಜ್ಯ ಘಟಕಕ್ಕೆ ಏಕಕಾಲದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಏಳು ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತದಾನದ ಹಕ್ಕು ಹೊಂದಿದ್ದರು.

ರಾಜ್ಯ ಘಟಕ: ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾಗಿ ಮತ್ತಿಕೆರೆ ಜಯರಾಂ, ನಿಂಗಪ್ಪ ಚಾವಡಿ, ಸೋಮಶೇಖರ ಕೆರಗೋಡು ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.  ಮೂರು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

ಜಿಲ್ಲಾ ಘಟಕಗಳು: ಹದಿಮೂರು ಜಿಲ್ಲಾ ಘಟಕಗಳಿಗೆ ಅವಿರೋಧ ಆಯ್ಕೆ ಆಗಿದ್ದು ಇನ್ನುಳಿದ ಜಿಲ್ಲೆಗಳಿಗೆ ಚುನಾವಣೆ ನಡೆದಿತ್ತು. ಕೆಯುಡಬ್ಲ್ಯೂಜೆ ಪರವಾಗಿ ಹಿರಿಯ ವಕೀಲ ಎಸ್.ಬಿ.ಮುಕ್ಕಣ್ಣಪ್ಪ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X