Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ...

ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿಎಂ ಮಾರ್ಗದರ್ಶಿ ಕಾರ್ಯಕ್ರಮ: ಬಸವರಾಜ ಬೊಮ್ಮಾಯಿ

ಉಡುಪಿಯಲ್ಲಿ ಕೇಂದ್ರ ಗ್ರಂಥಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 April 2022 8:43 PM IST
share
ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿಎಂ ಮಾರ್ಗದರ್ಶಿ ಕಾರ್ಯಕ್ರಮ: ಬಸವರಾಜ ಬೊಮ್ಮಾಯಿ

ಉಡುಪಿ : ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳ  ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿ ಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. 

ಸೋಮವಾರ ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯಗಳನ್ನು ಉದ್ಘಾಟಿಸಿ, ಡಾ.ಬನ್ನಂಜೆ ಗೋವಿಂದಾ ಚಾರ್ಯರ ಪುತ್ಥಳಿ ಅನಾವರಣಾಗೊಳಿಸಿ ಅವರು ಮಾತನಾಡುತಿದ್ದರು. 

ಸಿಎಂ ಮಾರ್ಗದರ್ಶಿ ಯೋಜನೆಯ ಮೂಲಕ, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು, ಪರೀಕ್ಷಾ ವಿಧಾನ, ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಸಾಫ್ಟ್‌ವೇರ್‌ನಲ್ಲಿ  ಅಳವಡಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ತಮ್ಮ ಕಂಪ್ಯೂಟರ್, ಮೊಬೈಲ್, ಲ್ಯಾಪ್ ಟಾಪ್ ಮೂಲಕ ಅಧ್ಯಯನ ಮಾಡಲು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಾಧ್ಯವಾಗಲಿದೆ ಎಂದವರು ವಿವರಿಸಿದರು.

ಇಂದಿನ ಯುವ ಜನತೆಯಲ್ಲಿ ಬಹಳಷ್ಟು ವಿಚಾರಗಳ ಬಗ್ಗೆ ಸ್ಪಷ್ಟತೆ ಇದೆ.  ದೇಶದ ಬಗ್ಗೆ, ನಾಡಿನ ಬಗ್ಗೆ, ಬದುಕಿನ ಬಗ್ಗೆ, ಆದರ್ಶಗಳನ್ನು ತುಂಬಿ ಕೊಂಡಿದ್ದಾರೆ. ಯುವಕರು ತಾವು ನಂಬಿರುವ ಆದರ್ಶಗಳನ್ನು ಎಂದಿಗೂ ಕೈ ಬಿಡಬಾರದು. ಅವೇ ಅವರಿಗೆ ದಾರಿದೀಪ. ನಿಮ್ಮ ಮೇಲೆ ನಂಬಿಕೆ ಇಡಿ,   ಯುವಕರು ತಮ್ಮ ಅಸ್ತಿತ್ವ ಮತ್ತು ಸಾಧನೆ ಮೇಲೆ ನಂಬಿಕೆ ಇಟ್ಟುಕೊಂಡಲ್ಲಿ ಇಡೀ ಜಗತ್ತು ಗೆಲ್ಲಬಹುದು. ಚಾರಿತ್ರ್ಯವಂತ ಸಮಾಜ ನಿರ್ಮಾಣವಾದಲ್ಲಿ ದೇಶ ಸದೃಢವಾಗಲಿದೆ. ಆದ್ದರಿಂದ ಮಹನೀಯರ ಆಚರಣೆಗಳನ್ನು ಪಾಲಿಸಬೇಕು ಎಂದರು.

ತತ್ವಜ್ಞಾನ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಜಗತ್ತಿನ ಎಲ್ಲಾ ವಿಜ್ಞಾನಿಗಳು ತತ್ವಜ್ಞಾನಿಗಳಾಗಿದ್ದಾರೆ. ತತ್ವಜ್ಞಾನದ ಮೂಲಕ ಸರಿ ತಪ್ಪುಗಳು ಚಿಂತನೆ ಮೂಡಲಿದೆ. ಚಿಂತನೆಯು ತರ್ಕಕ್ಕೆ ದಾರಿ ಮಾಡಿಕೊಡುತ್ತದೆ. ಇದರಿಂದ ಸರಿತಪ್ಪುಗಳು ಚರ್ಚೆಗೊಳಗಾಗುತ್ತದೆ ಎಂದು ಸಿಎಂ ಬೊಮ್ಮಾಯಿ ನುಡಿದರು.

ಉಡುಪಿಯಲ್ಲಿ ಆರಂಭಿಸಿರುವ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಗ್ರಂಥಾಲಯದಲ್ಲಿ ತತ್ವಜ್ಞಾನ ಮತ್ತು ತಂತ್ರಜ್ಞಾನವನ್ನು ಒಟ್ಟಿಗೆ ಕಲಿಯುವ ಅವಕಾಶವಿದ್ದು,  ಡಿಜಿಟಲ್ ಲೈಬ್ರರಿಯಲ್ಲಿ ಸಾಫ್ಟ್‌ವೇರ್ ನಿರಂತರವಾಗಿ ಅಪ್‌ಡೇಟ್ ಆಗುತ್ತಿರುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಸಭೆಯನ್ನುದ್ದೇಶಿಸಿ ಮಾತನಾಡಿದರು. 

ವೇದಿಕೆಯಲ್ಲಿ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ವಿಧಾನಪರಿಷತ್ ಶಾಸಕ  ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎಸ್ಪಿ ವಿಷ್ಣುವರ್ಧನ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ, ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ, ಬನ್ನಂಜೆ ಗೋವಿಂದಾಚಾರ್ಯರ ಪುತ್ರ ವಿನಯಭೂಷಣ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿ ವಾಸುದೇವ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X