ಮಂಗಳೂರು: ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ

ಮಂಗಳೂರು : ತುಳು ಧರ್ಮ ಸಂಶೋಧನಾ ಕೇಂದ್ರದ ವತಿಯಿಂದ ಕೊಡಮಾಡುವ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ’ಸಾವಿತ್ರಿಬಾಯಿ ಫುಲೆ’ ಪ್ರಶಸ್ತಿಯನ್ನು ಶಿಕ್ಷಕಿಯರಾದ ಸುಧಾ ನಾಗೇಶ್ ಹಾಗೂ ವಿಜಯಲಕ್ಷ್ಮಿ ಕಟೀಲು ಅವರಿಗೆ ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಜ್ಯೋತಿ ಚೇಳಾಯಿರು ವಹಿಸಿದ್ದರು. ಪೇರೂರು ಜಾರು ಸ್ವಾಗತಿಸಿದರು. ಅರುಣಾ ನಾಗರಾಜ್ ಕಾರ್ಯಕ್ರಮ ರೂಪಿಸಿದರು. ಆಕೃತಿ ಭಟ್ ಆಶಯಗೀತೆ ಹಾಡಿದರು. ರೇಖಾ ವಂದಿಸಿದರು.
Next Story