ಕೆಎಸ್ಸಾರ್ಟಿಸಿ ಅತ್ಯುತ್ತಮ ಇಂಧನ ಕ್ಷಮತೆ: 5 ಲಕ್ಷ ರೂ.ನಗದು ಬಹುಮಾನ, ಪ್ರಶಸ್ತಿ ಪ್ರದಾನ

ಬೆಂಗಳೂರು, ಎ. 11: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಸಂಸ್ಥೆಯಾದ, ಪೆಟ್ರೋಲಿಯಂ ಸಂರಕ್ಷಣಾ ಸಂಶೋಧನಾ ಸಂಸ್ಥೆಯು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಇಂಧನ ಕ್ಷಮತಾ ಮಹೋತ್ಸವ ‘ಸಕ್ಷಮ್-2022’ ಅಂಗವಾಗಿ ನೀಡುವ ಪ್ರತಿಷ್ಠಿತ ಇಂಧನ ಕ್ಷಮತೆ ಸಾಧನೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) 5ಲಕ್ಷ ರೂ.ನಗದು ಪುರಸ್ಕಾರಕ್ಕೆ ಭಾಜನವಾಗಿದೆ.
ಹೊಸದಿಲ್ಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲಗಳ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರು, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಕೆಎಸ್ಸಾರ್ಟಿಸಿ ಮುಖ್ಯ ಯಾಂತ್ರಿಕ ಅಭಿಯಂತರ ಎಂ.ರಮೇಶ್ ಸೇರಿ ಹಿರಿಯ ಅಧಿಕಾರಿಗಳು ಹಾಜರಿದ್ದರು.
Next Story





