ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ

ಸಚಿವ ಈಶ್ವರಪ್ಪ
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪರನ್ನು ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಹಾಗೂ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಉಪಾಧ್ಯಕ್ಷ ಶಾಹೀದ್ ಅಲಿ ಮೊದಲಾದವರು ಉಪಸ್ಥಿತರಿದ್ದರು.
Next Story