ತನಿಖೆ ಆರಂಭ: ಎಫ್.ಎಸ್.ಎಲ್. ತಂಡದಿಂದ ಪರಿಶೀಲನೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣ

ಉಡುಪಿ, ಎ.13: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಆರಂಭಗೊಂಡಿದೆ.
ಈಗಾಗಲೇ ಉಡುಪಿಯಲ್ಲಿ ಮೊಕ್ಕಾಂ ಹೂಡಿರುವ ಮಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ(ಎಫ್.ಎಸ್.ಎಲ್)ದ ತಂಡವು ಸಂತೋಷ್ ಅವರ ಮೃತದೇಹ ಪತ್ತೆಯಾಗಿರುವ ಲಾಡ್ಜಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.
ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ಹಾಗೂ ಕುಟುಂಬಿಕರ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಂತೋಷ್ ಪಾಟೀಲ್ ಮೃತದೇಹ ಪತ್ತೆಯಾಗಿರುವ ರೂಮಿನ ಬಾಗಿಲು ತೆರೆದು ತನಿಖೆ ಆರಂಭಿಸಲಾಗಿದೆ.
ಪಂಚನಾಮೆ ಬಳಿಕ ಮೃತದೇಹವನ್ನು ಮಣಿಪಾಲ ಕೆಎಂಸಿಯ ಶವಾಗಾರಕ್ಕೆ ವರ್ಗಾಯಿಸಿ ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Next Story