ಉಳ್ಳಾಲ: ಯುವಕನಿಗೆ ಚೂರಿ ಇರಿತ

ಉಳ್ಳಾಲ, ಎ.13: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಮುಕಚೇರಿ ನಿವಾಸಿ ಅಲ್-ಸಾದೀನ್ (24) ಚೂರಿ ಇರಿತಕ್ಕೊಳಗಾದ ಯುವಕ. ಮಂಗಳವಾರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಾಲ್ವರ ತಂಡ ಕೃತ್ಯ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಅವರ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದೆ. ಸ್ನೇಹಿತರಾದ ಅಪ್ಪಿ ಹಾಗೂ ಇತರ ಮೂವರು ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಗಾಯಾಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಉಳ್ಳಾಲ ಠಾಣಾಧಿಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ತನಿಖೆ ಆರಂಭಿಸಿದೆ.
Next Story





