ಗೃಹ ಸಚಿವ ಆರಗ ಜ್ಞಾನೇಂದ್ರ ಕುರಿತು ಹೇಳಿಕೆ ವಿಚಾರ: ಬಿ.ಕೆ ಹರಿಪ್ರಸಾದ್ ವಿರುದ್ಧ ದೂರು

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಿರುದ್ಧ ಬಿಜೆಪಿ ಮುಖಂಡ ಎನ್. ಆರ್ ರಮೆಶ್ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಗೃಹ ಸಚಿವರ ವಿರುದ್ಧ ಬಿ.ಕೆ ಹರಿಪ್ರಸಾದ್ ಅವರು ನಿಂದನಾತ್ಮಕ ಪದಗಳನ್ನು ಬಳಸಿ ಮಾನಹಾನಿ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.
Next Story





