Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂತ್ರಸ್ತ ಕುಟುಂಬಸ್ಥರ ಭೇಟಿಗೆ ಮಾಜಿ...

ಸಂತ್ರಸ್ತ ಕುಟುಂಬಸ್ಥರ ಭೇಟಿಗೆ ಮಾಜಿ ಸಚಿವ ಸೊರಕೆಗೆ ಅವಕಾಶ ನಿರಾಕರಣೆ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ13 April 2022 1:01 PM IST
share
ಸಂತ್ರಸ್ತ ಕುಟುಂಬಸ್ಥರ ಭೇಟಿಗೆ ಮಾಜಿ ಸಚಿವ ಸೊರಕೆಗೆ ಅವಕಾಶ ನಿರಾಕರಣೆ

ಉಡುಪಿ, ಎ.13: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರನ್ನು ಭೇಟಿಯಾಗಲು ಉಡುಪಿ ಶಾಂಭವಿ ಲಾಡ್ಜಿಗೆ ಆಗಮಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರಿಗೆ ತನಿಖೆಯ ಹಿನ್ನೆಲೆಯಲ್ಲಿ ಪೋಲಿಸರು ಅವಕಾಶ ನಿರಾಕರಿಸಿದ್ದಾರೆ.

ಲಾಡ್ಜ್ ಆವರಣಕ್ಕೆ ಬಂದ ವಿನಯಕುಮಾರ್ ಸೊರಕೆ ಅವರನ್ನು ಪೊಲೀಸರು, ಒಳಗೆ ಪಂಚನಾಮೆ ಪ್ರಗತಿಯಲ್ಲಿರುವುದರಿಂದ ಅವಕಾಶ ನಿರಾಕರಿಸಿದರು. ಪಂಚನಾಮೆ ಮುಗಿದ ಬಳಿಕ ಭೇಟಿಗೆ ಅವಕಾಶ ನೀಡುವುದಾಗಿ ಪೊಲೀಸರು ತಿಳಿಸಿದರು

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸೊರಕೆ, ಸಂತ್ರಸ್ತ ಸಂತೋಷ್ ಪಾಟೀಲ್ ಕುಟುಂಬದವರ  ಭೇಟಿಗೆ ಬಂದಿದ್ದೇನೆ. ಆದರೆ ಅದು ಸಾಧ್ಯವಾಗಿಲ್ಲ ಎಂದು ಹೇಳಿದರು.

ಇದೊಂದು‌ ದೊಡ್ಡ ದುರಂತ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ನೋಡಿದ್ದೇವೆ. ಆದರೆ ನಲ್ವತ್ತು ಪರ್ಸೆಂಟ್ ಕಮಿಷನ್ ಗಾಗಿ ಆತ್ಮಹತ್ಯೆ ದೇಶದಲ್ಲೇ ಪ್ರಥಮ. ಸರಕಾರ, ಸಚಿವ ಕೆ.ಎಸ್. ಈಶ್ವರಪ್ಪ ಈ ಮೂಲಕ ಪ್ರಸಿದ್ಧಿ ಪಡೆದಂತಾಗಿದೆ. ಈ ಹಿಂದೆ ಈಶ್ವರಪ್ಪ ನೋಟು ಲೆಕ್ಕ ಮಾಡುವ ಮಿಷನ್ ಬಳಸಿ ಪ್ರಸಿದ್ಧರಾಗಿದ್ದರು ಎಂದರು.

ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಕೇವಲ ಸಂತೋಷ್ ಪಾಟೀಲ್ ಗ ಮಾತ್ರ ಅಲ್ಲ. ಅನೇಕರು ಆದೇಶ ಇಲ್ಲದೆ ಗುತ್ತಿಗೆ ಕೆಲಸ ಮಾಡಿದ್ದಾರೆ. ಅವರೆಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಸಂತೋಷ್ ಪಾಟೀಲ್ ಗೆ ದಿಲ್ಲಿಗೆ ಹೋದರೂ ನ್ಯಾಯ ಸಿಗಲಿಲ್ಲ. ಪ್ರಧಾನಿ, ಗೃಹಸಚಿವರನ್ನು ಭೇಟಿಗೆ ಪ್ರಯತ್ನ‌ ಮಾಡಿದ್ದರು ಎಂದು ಸೊರಕೆ ತಿಳಿಸಿದರು

ಈ ಹಿಂದೆ ಪ್ರಧಾನಿ ಸಿದ್ದರಾಮಯ್ಯನವರದ್ದು ಪರ್ಸಂಟೇಜ್ ಸರ್ಕಾರ ಎಂದು ಟೀಕಿಸಿದ್ದರು. ಈಗ ಕರ್ನಾಟಕದಲ್ಲಿ ಏನಾಗ್ತಿದೆ? ಭ್ರಷ್ಟಾಚಾರಕ್ಕೆ  ಕಡಿವಾಣ ಹಾಕುವ ಭರವಸೆ ನೀಡಿದ ಪಕ್ಷ ಬಿಜೆಪಿ. ಆದರೆ  ಭ್ರಷ್ಟಾಚಾರದ ಕಾರಣಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ ಎಂದವರು ಹೇಳಿದರು.

 ಇನ್ನೆಷ್ಟು ಆತ್ಮಹತ್ಯೆಗಳಾಗಬೇಕು? ಇನ್ನೂ ಯಾವ ದಾಖಲೆ ಬೇಕು?  ತಕ್ಷಣ ಈಶ್ವರಪ್ಪರನ್ನು ಬಂಧಿಸಬೇಕು. ಆದರೆ ಮುಖ್ಯಮಂತ್ರಿಯವರಯ ಈಶ್ವರಪ್ಪರಿಗೆ ಹದರಬೇಡ ಎನ್ನುತ್ತಿದ್ದಾರೆ. ತಡ ಮಾಡದೆ ಈಶ್ವರಪ್ಪ ತಕ್ಷಣ ರಾಜೀನಾಮೆ ಕೊಡಬೇಕು.  ಇಲ್ಲದಿದ್ದರೆ ಪ್ರಕರಣವನ್ನು ತಿರುಚುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X