Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಈಶ್ವರಪ್ಪರ ವಿರುದ್ಧ ಸೆಕ್ಷನ್ 306ರಡಿ...

ಈಶ್ವರಪ್ಪರ ವಿರುದ್ಧ ಸೆಕ್ಷನ್ 306ರಡಿ ಕೇಸ್ ದಾಖಲಿಸಿ ಬಂಧಿಸಿ: ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 April 2022 1:30 PM IST
share
ಈಶ್ವರಪ್ಪರ ವಿರುದ್ಧ ಸೆಕ್ಷನ್ 306ರಡಿ ಕೇಸ್ ದಾಖಲಿಸಿ ಬಂಧಿಸಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಎ.13: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪರ ಮೇಲೆ ಸೆಕ್ಷನ್ 306 ರಡಿ ಕೇಸ್ ದಾಖಲಿಸಬೇಕು. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು. ಇದು ಗಂಭೀರ ಅಪರಾಧವಾಗಿರುವುದರಿಂದ ಕೂಡಲೇ ಅವರನ್ನು ಬಂಧಿಸಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇಂದು ಕಾಂಗ್ರೆಸ್ ಪಕ್ಷದ ನಿಯೋಗದ ಮೂಲಕ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ್ದೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಕೆ ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ನಿನ್ನೆಯಿಂದ ಎಲ್ಲಾ ಮಾಧ್ಯಮಗಳಲ್ಲಿ ವರದಿಯಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಗೆ ಹಳ್ಳಿ ರಸ್ತೆಗಳನ್ನು ನಿರ್ಮಾಣ ಮಾಡಲು ಸೂಚಿಸಿದ್ದಾರೆ. ಇದು ಒಟ್ಟು ರೂ. 4 ಕೋಟಿ ವೆಚ್ಚದ 108 ಕಾಮಗಾರಿಗಳು. ಇವೆಲ್ಲವನ್ನು ಖಾಸಗಿಯವರ ಬಳಿ ಸಾಲ ಮಾಡಿ, ಹೆಂಡತಿ ಒಡವೆಗಳನ್ನು ಅಡವಿಟ್ಟು ಸಾಲ ತಂದು ಗುಣಮಟ್ಟದ ಕೆಲಸ ಮಾಡಿ ಮುಗಿಸಿದ್ದಾನೆ. ಒಬ್ಬ ಮಂತ್ರಿಯಾಗಿ ತಾವೇ ಹೇಳಿ ಮಾಡಿಸಿದ ಕಾಮಗಾರಿಗಳ ವರ್ಕ್ ಆರ್ಡರ್ ಮತ್ತು ಬಿಲ್ ಪಾವತಿ ಮಾಡಲು 40 ಶೇ. ಕಮಿಷನ್ ಕೇಳಿದ್ದಾರೆ. ಆತನಿಗೆ ಬಿಲ್ ಹಣ ಪಡೆಯಲು ಬೆಂಗಳೂರಿಗೆ ತಿರುಗಿ ತಿರುಗಿ ಸಾಕಾಗಿದೆ. ಹಲವಾರು ಬಾರಿ ಈಶ್ವರಪ್ಪ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದಾನೆ. ಇದರ ಜೊತೆಗೆ ಪ್ರಧಾನಿಗಳಿಗೆ ಮತ್ತು ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾನೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾನೆ. ಇಷ್ಟೆಲ್ಲ ಮಾಡಿದ್ರೂ ಕೇಳಿದಷ್ಟು ಕಮಿಷನ್ ಕೊಟ್ಟಿಲ್ಲ ಎಂದು ವರ್ಕ್ ಆರ್ಡರ್ ಕೊಟ್ಟಿಲ್ಲ, ಹಣ ಬಿಡುಗಡೆ ಮಾಡಿಲ್ಲ. ತುಂಬ ಸಲ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾನವಿ ಮಾಡಿದ್ರೂ, ಈಗ ನನಗೆ ಸಂತೋಷ್ ಪಾಟೀಲ್ ಯಾರು ಅಂತಲೇ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈ ಸರಕಾರ 40 ಶೇ. ಕಮಿಷನ್ ಸರ್ಕಾರ. ಕಮಿಷನ್ ಗಾಗಿ ಕಿರುಕುಳ ನೀಡುತ್ತಿದೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ಸರ್ಕಾರದ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹೀಗೆ ಯಾವುದೇ ಇಲಾಖೆಗಳಲ್ಲಿ 40% ಕಮಿಷನ್ ಕೊಡದೆ ಯಾವ ಕೆಲಸಗಳು ಆಗಲ್ಲ. ಇದೇ ಕಾರಣಕ್ಕಾಗಿ ನಾನು ಸರ್ಕಾರದ ಭ್ರಷ್ಟಾಚಾರ ಪ್ರಸ್ತಾಪ ಮಾಡಲು ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಲು ಮನವಿ ನೀಡಿದ್ದೆ, ಆದರೆ ಸಭಾಧ್ಯಕ್ಷರು ನನಗೆ ಪ್ರಾಸ್ತಾವಿಕವಾಗಿ ಮಾತನಾಡಲು ಅವಕಾಶವನ್ನೇ ನೀಡದೆ ಸ್ವಯಂಪ್ರೇರಿತರಾಗಿ ನನ್ನ ಮನವಿ ತಿರಸ್ಕರಿಸಿದರು ಎಂದು ಸಿದ್ದರಾಮಯ್ಯ ಹೇಳಿದರು.

7/6/2021ರಲ್ಲಿ ಕೆಂಪಣ್ಣನವರು ಪ್ರಧಾನಿಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರೂ ಪ್ರಧಾನಿಯಾಗಲೀ, ಮುಖ್ಯಮಂತ್ರಿಯಾಗಲೀ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ಮಾಡಿಸಿಲ್ಲ. ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಅವರ ಬಳಿ 40 ಶೇ. ಕಮಿಷನ್ ಕೇಳಿದ್ದಾರೆ. ಅಂದರೆ 4 ಕೋಟಿ ರೂಪಾಯಿ ಕಾಮಗಾರಿಯಲ್ಲಿ 1 ಕೋಟಿ 60 ಲಕ್ಷ ರೂಪಾಯಿ ಕಮಿಷನ್ ಕೊಡಬೇಕು. ಪಾಪ ಒಬ್ಬ ಸಣ್ಣ ಗುತ್ತಿಗೆದಾರ ಇಷ್ಟು ಹಣ ಕೊಡೋಕೆ ಸಾಧ್ಯವ? ಇಂಥಾ ಭ್ರಷ್ಟ ಸರ್ಕಾರ ಕರ್ನಾಟಕದ ಇತಿಹಾಸದಲ್ಲಿ ಯಾವಾಗಲೂ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂತೋಷ್ ಪಾಟೀಲ್ ಉಡುಪಿಗೆ ಹೋಗಿ ಅಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಲು ಪ್ರಯತ್ನ ಮಾಡಿದ್ದಾರೆ. ಇದು ಸಾಧ್ಯವಾಗದೆ ಇದ್ದಾಗ ನನ್ನ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ ಎಂದು ವಾಟ್ಸ್ ಆ್ಯಪ್ ಮೇಸೇಜ್ ಅನ್ನು ತನ್ನ ಸ್ನೇಹಿತರಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಡೆತ್ ನೋಟ್ ಅಂತಲೇ ಪರಿಗಣಿಸಬೇಕು. ಈಶ್ವರಪ್ಪರನ್ನು ಈ ಕೂಡಲೇ ಬಂಧಿಸಬೇಕು, ಮೃತ ಸಂತೋಷ್ ಪಾಟೀಲ್ ಸಹೋದರ ನೀಡಿರುವ ದೂರಿನಲ್ಲಿ ತನ್ನ ಸಹೋದರನ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ ಎಂದಿದೆ, ಇದು ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಅಪರಾಧವೂ ಹೌದು. ಹಾಗಾಗಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13 ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು, ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಈಶ್ವರಪ್ಪ ಅವರಿಗೆ ಹತ್ತು ವರ್ಷ ಕಾರಾಗ್ರಹ ಶಿಕ್ಷೆ ವಿಧಿಸಲು ಅವಕಾಶ ಇದೆ, ಜೊತೆಗೆ ಇದೊಂದು ಜಾಮೀನು ರಹಿತ ಅಪರಾಧವಾಗಿದೆ. ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಸರ್ಕಾರಕ್ಕೆ ಮಾನ ಮರ್ಯಾದಿ ಇದ್ದರೆ, ರಾಜ್ಯದ ಜನರ ಪ್ರಾಣ ಕಾಪಾಡಬೇಕು ಎಂಬ ಜವಾಬ್ದಾರಿ ಇದ್ದರೆ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು ಮತ್ತು ಸಂಪುಟದಿಂದ ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X